ಜಾನುವಾರುಗಳ ಆರೋಗ್ಯಕ್ಕೆ ಆದ್ಯತೆ ನೀಡಿ: ಗಜಾನನ ಬಾಲೆ
Prioritize the health of livestock: Gajanana Bale
ಬಾಗಲಕೋಟೆ 16: ಜಿಲ್ಲೆಯ ಜಾನುವಾರುಗಳ ಆರೋಗ್ಯ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆ ಒದಗಿಸುವಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ರೈತರು ಹಾಗೂ ಪಶುಪಾಲಕರ ಆದಾಯ ಹೆಚ್ಚಳಕ್ಕೆ ಪೂರಕವಾಗುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯೋಜನೆಗಳ ಸೌಲಭ್ಯಗಳು ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 