ಚಿಕ್ಕೋಡಿ

ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಿ: ನ್ಯಾಯಮೂರ್ತಿ ವೀರ​‍್ಪ

ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಿ: ನ್ಯಾಯಮೂರ್ತಿ ವೀರ​‍್ಪ

ಲೋಕದರ್ಶನ ವರದಿ 

 ಚಿಕ್ಕೋಡಿ   ಸೆ.25: ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಕಾನೂನು ಪಾಲನೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿಕಾರಿಗಳು ಜನಸೇವೆಯಲ್ಲಿ ಕಲ್ಪವೃಕ್ಷದಂತಾಗಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರ​‍್ಪ ಹೇಳಿದರು.  

 ಹಾಲಟ್ಟಿಯ ಎಂ.ಕೆ. ಕವಟಗಿಮಠ ಸಭಾಭವನದಲ್ಲಿ ಶುಕ್ರವಾರ ನಡೆದ ಚಿಕ್ಕೋಡಿ ಉಪವಿಭಾಗಕ್ಕೆ ಸಂಬಂಧಿಸಿದ ಬಾಕಿ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

 ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಪ್ರೀತಿ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಬೇಕು. ವಿದ್ಯಾವಂತರು ಭ್ರಷ್ಟಾಚಾರ ಮುಕ್ತವಾಗಿ ಕಾರ್ಯನಿರ್ವಹಿಸಬೇಕು. ಆತ್ಮಸಾಕ್ಷಿಗೆ ವಿರುದ್ಧವಾಗಿ ಯಾವುದೇ ಕೆಲಸ ಮಾಡಬಾರದು. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.  


ಸುದ್ದಿ ಓದಿ