ಯುವಶಕ್ತಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ಆದ್ಯತೆ: ವಿಜಯೇಂದ್ರ
Priority for education, employment, and skills for the youth: Vijayendra
ಬಳ್ಳಾರಿ, ಸೆ.7: ದೇಶದ ಯುವಶಕ್ತಿಯನ್ನು ಸರಿಯಾದ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗದೊಂದಿಗೆ ಸಜ್ಜುಗೊಳಿಸಿದರೆ ಯುವಜನತೆ ದೇಶದ ದೊಡ್ಡ ಆಸ್ತಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಯುವಜನತೆ, ಉದ್ಯೋಗ, ಶಿಕ್ಷಣ, ಕೆಪಿಎಸ್ಸಿ ಸುಧಾರಣೆ, ಕೃತಕ ಬುದ್ಧಿಮತ್ತೆ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಯುವಕರೊಂದಿಗೆ ನಡೆದ ಮುಕ್ತ ಸಂವಾದದಲ್ಲಿ ಅವರು ಮಾತನಾಡಿದರು.
ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬದಿಂದ ಅಭ್ಯರ್ಥಿಗಳಲ್ಲಿ ಅಸಮಾಧಾನ ಉಂಟಾಗಿದೆ. ನೇಮಕಾತಿ ವ್ಯವಸ್ಥೆಗೆ ಹೊಸ ಕಾರ್ಯಕಲ್ಪ ನೀಡುವ ಅಗತ್ಯವಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಪಿಎಸ್ಸಿ ಸುಧಾರಣೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳನ್ನು ಬಲಪಡಿಸುವ ಮೂಲಕ ಯುವಕರು ನಗರಗಳಿಗೆ ವಲಸೆ ಹೋಗುವುದನ್ನು ತಡೆಯಬೇಕು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಮರ್ಕ ಬಜೆಟ್, ನೀರಾವರಿ, ಉತ್ತಮ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಕೈಗಾರಿಕೆಗಳಿಗೆ ಆದ್ಯತೆ ನೀಡಬೇಕಿದೆ ಎಂದರು.
ಹಾಗೂ ತಂತ್ರಜ್ಞಾನದಿಂದ ಉದ್ಯೋಗಗಳು ಕಡಿಮೆಯಾಗುವ ಆತಂಕಕ್ಕಿಂತ, ಹೊಸ ಕೌಶಲ್ಯಗಳನ್ನು ಕಲಿತು ಹೊಸ ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳುವತ್ತ ಯುವಕರು ಗಮನಹರಿಸಬೇಕು. ಪ್ರವಾಸೋದ್ಯಮದ ಮೂಲಕವೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶವಿದೆ ಎಂದು ವಿಜಯೇಂದ್ರ ಹೇಳಿದರು.
ಯುವಕರು ತಾತ್ಕಾಲಿಕ ರಾಜಕೀಯ ಆಕರ್ಷಣೆಗಳಿಗಿಂತ ಶಿಕ್ಷಣ, ಕೌಶಲ್ಯ, ಉದ್ಯೋಗ ಮತ್ತು ಸ್ವಾಭಿಮಾನಿ ಬದುಕಿನ ಅವಕಾಶಗಳತ್ತ ಗಮನಹರಿಸಬೇಕು. ಅನ್ಯಾಯವನ್ನು ಪ್ರಶ್ನಿಸಿ, ಹೋರಾಡಿ ಬದಲಾವಣೆ ತರುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 