ಬೆಳಗಾವಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ


ಬೆಳಗಾವಿ 6: ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.  

ಬೆಳಗಾವಿಯ ಕುವೆಂಪುನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಮಂಗಳವಾರ ಕ್ಷೇತ್ರದ 36 ದೇವಸ್ಥಾನಗಳಿಗೆ ಕೊನೆಯ ಕಂತಿನ ಅನುದಾನ ಬಿಡುಗಡೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಕ್ಷೇತ್ರದ 36 ದೇವಸ್ಥಾನಗಳಿಗೆ ಬಾಕಿ ಇದ್ದ ಮೂರನೇ ಹಾಗೂ ಅಂತಿಮ ಕಂತಿನ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿಗಳ ಪ್ರತಿನಿಧಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಗುತ್ತಿದೆ.

ಕಳೆದ ಏಳು ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ 156ಕ್ಕೂ ಹೆಚ್ಚು ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 150 ಕೋಟಿಗೂ ಅಧಿಕ ಅನುದಾನ ದೊರಕಿಸಲಾಗಿದೆ. 10 ಲಕ್ಷದಿಂದ ?5 ಕೋಟಿವರೆಗೆ ವಿವಿಧ ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.  


ಸುದ್ದಿ ಓದಿ