ತಾಳಿಕೋಟೆ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ನಾಡಗೌಡ
ತಾಳಿಕೋಟೆ 21: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಅಗತ್ಯ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು.
ಪಟ್ಟಣದಲ್ಲಿ 8.41 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಚಾಲನೆ ಹಾಗೂ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ 30 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳಿಸಲಾಗುವುದು. ತಾಳಿಕೋಟೆ- ಮುದ್ದೆಬಿಹಾಳ ಮಾರ್ಗದ ಸೋಗಲಿ ಹಳ್ಳದ ಸೇತುವೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದರು.
ಶೀಘ್ರದಲ್ಲೇ ಪ್ರಜಾಸೌಧ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು. 860 ಕೋಟಿ ವೆಚ್ಚದ . ತಾಳಿಕೋಟೆ- ಮುದ್ದೆಬಿಹಾಳ ರಸ್ತೆ ಕಾಮಗಾರಿಗೆ ಎರಡು ಹಿ ಮೂರು ತಿಂಗಳಲ್ಲಿ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರು ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ತಾಳಿಕೋಟೆ ಎಪಿಎಂಸಿಯನ್ನು ಎಂದು ಪ್ರತ್ಯೇಕವಾಗಿ ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬರ ಪರಿಸ್ಥಿತಿಯಲ್ಲೂ ಕೆಲವರು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ರಾಜಕೀಯ ಮಾಡದೆ ಸಹಕಾರ ನೀಡಬೇಕು. ತಾಳಿಕೋಟೆಯನ್ನು ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು, ಶೀಘ್ರ ಘೋಷಣೆಯಾಗುವ ವಿಶ್ವಾಸವಿದೆ ಎಂದು ನಾಡಗೌಡ ಹೇಳಿದರು.