ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಭಿವೃದ್ಧಿಗೆ ಆದ್ಯತೆ: ಹನುಮೇಶ ಮುರಡಿ
Priority for the development of the Koppal District Advocates' Association: Hanumesha Muradi
ಕೊಪ್ಪಳ 09: ಜಿಲ್ಲಾ ವಕೀಲರ ಸಂಘದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಹಿರಿಯ ಹಾಗೂ ಕಿರಿಯ ವಕೀಲರ ಸಲಹೆ ಸೂಚನೆ ಮೇರೆಗೆ ಮೊದಲ ಆದ್ಯತೆ ನೀಡವೆ ಎಂದು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹನುಮೇಶ ಮುರಡಿ ಹೇಳಿದರು.ಅವರು ಗುರುವಾರದಂದು ನಗರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಕೀಲರ ವೃತ್ತಿಪರ ಹಿತಾಸಕ್ತಿಯನ್ನು ಕಾಪಾಡುವ ಜೊತೆಗೆ ಸಂಘದ ಮೂಲಸೌಕರ್ಯ ಅಭಿವೃದ್ಧಿ, ಸದಸ್ಯರಿಗೆ ಅಗತ್ಯ ಸೌಲಭ್ಯಗಳು ಹಾಗೂ ಯುವ ವಕೀಲರಿಗೆ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ ಅವರು ಸಂಘದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಾರದರ್ಶಕ ಹಾಗೂ ಸಮನ್ವಯದ ಆಡಳಿತ ನಡೆಸಲಾಗುವುದು.
ಹಿರಿಯ ಮತ್ತು ಕಿರಿಯ ವಕೀಲರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಮೂಲಕ ಸಂಘವನ್ನು ಇನ್ನಷ್ಟು ಸದೃಢಗೊಳಿಸುವ ಗುರಿ ಹೊಂದಲಾಗಿದೆ ಎಂದು ಅವರು ಜಿಲ್ಲಾ ವಕೀಲರ ಸಂಘದ ಏಳಿಗೆಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಅಗತ್ಯವಾಗಿದೆ. ಎಲ್ಲರ ಸಲಹೆ ಮತ್ತು ಸಹಕಾರದೊಂದಿಗೆ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹನುಮೇಶ ಮುರಡಿ ಹೇಳಿದರು.ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ ಎ.ವಿ ಕಣವಿ ಮಾತನಾಡಿ ಹಿರಿಯ ನ್ಯಾಯವಾದಿ ಹನುಮೇಶ ಮುರುಡಿ 2019-2021 ಎರಡು ವರ್ಷದ ಅವಧಿಯಲ್ಲಿ ವಕೀಲರ ಸಂಘದ ಅಭಿವೃದ್ಧಿಗೆ ಸಾಕಷ್ಟು ಉತ್ತಮ ಕಾರ್ಯಗಳನ್ನು ನಿರ್ವಹಿಸಿದ್ದು ಈ ಬಾರಿ ಅಭಿವೃದ್ಧಿಗೆ ಮತ್ತು ಸೇವೆ ಮಾಡಲು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 