ಧಾರವಾಡ - ಹುಬ್ಬಳ್ಳಿ

‘ಎಫ್‌ಎಲ್‌ಎನ್‌- ಎಲ್‌ಬಿಎ ಬಲವರ್ಧನೆ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಆದ್ಯತೆ’

‘ಎಫ್‌ಎಲ್‌ಎನ್‌- ಎಲ್‌ಬಿಎ ಬಲವರ್ಧನೆ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಆದ್ಯತೆ’

ಲೋಕದರ್ಶನ ವರದಿ 

  ಧಾರವಾಡ : ‘ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ, ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ   ಕಾರ್ಯಕ್ರಮ ಹಾಗೂ ಪಾಠ ಆಧಾರಿತ ಮೌಲ್ಯಾಂಕನವನ್ನು   ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಶಿಕ್ಷಕರು  ಹಾಗು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು,’ ಎಂದು ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ಹೇಳಿದರು. ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್‌ನಲ್ಲಿರುವ ದೇಶಪಾಂಡೆ ಫೌಂಡೇಶನ್ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಎಫ್‌ಎಲ್‌ಎನ್ ಅನುಷ್ಠಾನ, ಎಲ್‌ಬಿಎ ಹಾಗೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ಕಳೆದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬೆಳಗಾವಿ ವಿಭಾಗವು ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿಂದೆ ಶಿಕ್ಷಕರು, ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಹಂತದ ಸಿಬ್ಬಂದಿಯ ನಿರಂತರ ಪರಿಶ್ರಮವಿದೆ.

ಈ ಸಾಧನೆಗೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು’ ಎಂದು ಅಭಿನಂದಿಸಿದರು. ಪ್ರಥಮ ಸ್ಥಾನ ಗಳಿಸಿದ್ದೇವೆ ಎಂಬ ತೃಪ್ತಿಯಲ್ಲಿ ನಿಲ್ಲದೆ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯೂ ಅದೇ ಸಾಧನೆಯನ್ನು ಇನ್ನಷ್ಟು ಉತ್ತಮಗೊಳಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕಳೆದ ವರ್ಷ ಅನುಸರಿಸಿದ ನೀಲನಕ್ಷೆಯನ್ನು ಈ ವರ್ಷವೂ ಮುಂದುವರಿಸಲಾಗಿದೆ. ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪರೀಕ್ಷಾ ಸಿದ್ಧತೆಗೆ ಇನ್ನೂ ಸಾಕಷ್ಟು ಸಮಯಾವಕಾಶವಿದ್ದು, ಪ್ರತಿಯೊಂದು ಹಂತದಲ್ಲಿಯೂ ಯೋಜಿತವಾಗಿ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯ, ಎಂದರು. ‘ನಮ್ಮ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸುವುದಷ್ಟೇ ಗುರಿಯಾಗಬಾರದು. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಅತ್ಯುತ್ತಮ ಮತ್ತು ಗುಣಮಟ್ಟದ ಫಲಿತಾಂಶ ಪಡೆಯಲು ಶಿಕ್ಷಕರು ಶ್ರಮಿಸಬೇಕು.

ಸುದ್ದಿ ಓದಿ