ಜೈಲು ಸಿಬ್ಬಂದಿಗಳ ಮೇಲೆ ಖೈದಿಗಳಿಬ್ಬರಿಂದ ಹಲ್ಲೆ: ಜೈಲು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು
Prison staff attacked by two inmates: Prison staff admitted to hospital
ಕಾರವಾರ 06 : ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಮಂಗಳೂರು ಮೂಲದ ರೌಡಿಗಳು ಜೈಲರ್ ಹಾಗೂ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆಯಲ್ಲಿ ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ , ಕರ್ತವ್ಯ ನಿರತ ಮೂವರು ಜೈಲು ಇತರ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ. ಜೈಲಿನಲ್ಲಿ ತಂಬಾಕು, ಗಾಂಜಾ , ಸಿಗರೇಟುನಂಥ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಿ, ತಪಾಸಣೆಯನ್ನು ಬಿಗಿ ಮಾಡಿದ ಕ್ರಮವನ್ನು ಸಹಿಸದ ಆರೋಪಿಗಳು, ಸಿಬ್ಬಂದಿಗಳೊಂದಿಗೆ ತಗಾದೆ ತೆಗೆದಿದ್ದಾರೆ. ಈ ವೇಳೆ ಮಾತುಕತೆ ವಿಕೋಪಕ್ಕೆ ಹೋಗಿ, ಜೈಲರ್ ಹಾಗೂ ಜೈಲು ಸಿಬ್ಬಂದಿಗಳ ಬಟ್ಟೆ ಹರಿದು, ಮನಬಂದಂತೆ ಥಳಿಸಿದ್ದಾರೆ.
ಜೈಲು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳು , ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಮಂಗಳೂರು ಜೈಲಿನಲ್ಲಿ ವಿಚಾರಣಾಧೀನ ಕೈದಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಇವರನ್ನು ಕಾರವಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು.ಕಳೆದ ಕೆಲ ದಿನಗಳಿಂದ ಜೈಲಿನಲ್ಲಿ ಶಿಸ್ತು ಕ್ರಮಗಳನ್ನು ಬಿಗಿಗೊಳಿಸಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ರೌಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಜೈಲರ್ ಹಾಗೂ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 