ಸರ್ಕಾರಿ ಶಾಲೆಗೆ ಖಾಸಗಿ ಕಂಪನಿ ಹತ್ತು ಲಕ್ಷ ರೂಪಾಯಿಯ ಪೀಠೋಪಕರಣಗಳು ದೇಣಿಗೆ
Private company donates furniture worth Rs 10 lakh to government school
ಆಲಮೇಲ 31 : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಪೀಠೋಪಕರಣಗಳಂತ ದೇಣಿಗೆ ನೀಡಿದರೆ ಶಾಲೆಗಳು ಪ್ರಗತಿ ಹೊಂದುತ್ತವೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು. ಅವರು ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಕಂಪನಿಯು ಸಿ ಎಸ್ ಆರ್ ಯೋಜನೆಯಡಿಯಲ್ಲಿ ತಾಲೂಕಿನ ಹೂವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಸುಮಾರು 10 ಲಕ್ಷ ವೆಚ್ಚದ ಪೀಠೋಪಕರಣಗಳ ವಿತರಣೆ ಹಾಗೂ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಹೇಳಿದರು.
ಖಾಸಗಿ ಕಂಪನಿಗಳು ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಜೊತೆಗೆ ರೈತರ ಬೆಳೆಗಳ ಮಾಹಿತಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು. ಯಾವುದೇ ಖಾಸಗಿ ಕಂಪನಿಗಳು ರೈತರಿಗೋಸ್ಕರ ಹಮ್ಮಿಕೊಂಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಸಂಗಯ್ಯ ಸ್ವಾಮಿ ಹಿರೇಮಠ, ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ,
ಕೋರಮಂಡಲ್ ಕಂಪನಿಯ ರಾಜ್ಯ ಮುಖ್ಯ ವ್ಯವಸ್ಥಾಪಕ ಶಿವನಗೌಡ ಪಾಟೀಲ್, ಬೆಂಗಳೂರು ಹಿರಿಯ ವಲಯ ವ್ಯವಸ್ಥೆ ರಂಜಿತ್ ಕುಮಾರ್ ಶೆಟ್ಟಿ, ಅಬ್ದುಲ್ ರಜಾಕ್, ಸಹಾಯಕ ಕೃಷಿ ಅಧಿಕಾರಿ ಪ್ರಶಾಂತ್ ಶಾಣಿ, ಅಲಮೇಲ ರೈತ ಸಂಪರ ಕೇಂದ್ರದ ಅಧಿಕಾರಿ ಅನಿಲ ದಶವಂತ, ಪಶುಸಂಗೋಪನಾಧಿಕಾರಿ ಶಿವನಗೌಡ ಯಲಗೊಂಡ, ಕೋರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಕಾಶ ಪಾಟೀಲ, ಎಪಿಎಂಸಿ ಅಧ್ಯಕ್ಷ ಬಸು ಬಾಗೇವಾಡಿ, ಶ್ರೀಶೈಲ್ ಪೂಜಾರಿ, ಹಾಗೂ ಶಾಲೆಯ ಶಿಕ್ಷಕರು ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 