ಬೆಳಗಾವಿ

ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಬೆಟಗೇರಿ 24 : ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ  ಸಂಕೇಶ್ವರದ ಎಸ್‌.ಡಿ. ಹೈಸ್ಕೂಲ್ ನಲ್ಲಿ ಶನಿವಾರ ಅ.24ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾಳೆ. ಶಾಲೆಯ ಅತಿಥಿ ಶಿಕ್ಷಕ ಮಂಜುನಾಥ ಸವತಿಕಾಯಿ ಮತ್ತು ಬಸವರಾಜ ಗೋಸಲಿ ಈ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿನಿ ಸಾಧನೆಗೆ ಮೆಚ್ಚುಗೆ: ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ