ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ಯರಗಟ್ಟಿ 10: ಸಮೀಪದ ಕಡಬಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು.
2019-20 ನೇ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಪ್ರದೀಪ ಇಂಡಿ, 2020-21 ನೇ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಲಕ್ಷ್ಮೀ ಸರ್ವಿ, 2021-22 ನೇ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಪವಿತ್ರಾ ಹಣಸಿ ಇವರಿಗೆ ಶಿಕ್ಷಣ ಪ್ರೇಮಿ ತುಕಾರಾಮ ಸುಣಧೋಳಿ ಪ್ರತಿ ವಿದ್ಯಾರ್ಥಿಗೆ 5000ರೂ ನೀಡಿ ಗೌರವಿಸಿ ಸನ್ಮಾನಿಸಿದರು.
ಇನ್ನೂ ಮುಂದೆನೂ ಸಹ ಪ್ರತಿ ವರ್ಷ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5000ರೂ ನೀಡುತ್ತೇನೆ. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಿ ನಮ್ಮ ಗ್ರಾಮಕ್ಕೆ ಕೀರ್ತಿ ತರಬೇಕು ಎಂದರು. ಸಂದರ್ಭದಲ್ಲಿ ರಾಜು ಇಂಡಿ, ಜ್ವಾಲಾ ಹುಂಡೇಕಾರ, ಯಲ್ಲಪ್ಪ ಮೆಣಸಿ, ಗ್ರಾಮದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.