ಗಣ ವೇಷಧಾರಿಗಳ ಪಥ ಸಂಚಲನ
ಹೂವಿನಹಡಗಲಿ: ನ.08- ಪಟ್ಟಣದಲ್ಲಿ ಗಣವೇಷಧಾರಿಗಳ ಪಥ ಸಂಚಲನ ಜರುಗಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ನಿಂತಿದ್ದ ಯುವಕರು, ಮಹಿಳೆಯರು, ಭಾರತ ಮಾತೆ ಭಾವಚಿತ್ರಕ್ಕೆ ಮತ್ತು ಗಣವೇಷಧಾರಿಗಳ ಮೇಲೆ ಪುಷ್ಪಾರ್ಚನೆ ಮಾಡಿದರು. ಇಲ್ಲಿನ ತಾಲೂಕು ಕ್ರೀಡಾಂಗಣದಿಂದ ವ್ಯಾಕರಣ ತೀರ್ಥ ಚಂದ್ರಶೇಖ ಶಾಸ್ತ್ರಿ ರಸ್ತೆ ಮೂಲಕ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವೃತ್ತ, ಈಟಿ ಶಂಭುನಾಥ ವೃತ್ತ, ಮದಲಗಟ್ಟ ವೃತ್ತದಿಂದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಹೊಸ ಬಸ್ ನಿಲ್ದಾಣ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ಮತ್ತೆ ತಾಲೂಕು ಕ್ರೀಡಾಂಗಣಕ್ಕೆ ಹೋಗಿ ಸಮಾವೇಶ ಗೊಂಡರು. ಪಥ ಸಂಚಲನದಲ್ಲಿ ಶಾಸಕ ಕೃಷ್ಣ ನಾಯ್ಕ ಭಾಗಿಯಾಗಿದ್ದರು. ದಾರಿಯುದ್ದಕ್ಕೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.