ಸಫಾಯಿ ಕರ್ಮಚಾರಿಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ 07: ಸಫಾಯಿ ಕರ್ಮಚಾರಿಗಳ ಆಥರ್ಿಕ, ಸಾಮಾಜಿಕ, ಶೈಕ್ಷಣಿಕ ಜೀವನಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗವು ವರದಿಯೊಂದನ್ನು ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಇಡೀ ದೇಶದಾದ್ಯಂತ ಸಫಾಯಿ ಕರ್ಮಚಾರಿಗಳ ಏಕರೂಪದ ಸಂಬಳದ ವ್ಯವಸ್ಥೆ, ಕೆಲಸದ ಶೈಲಿ, ಖಾಯಂಗೊಳಿಸುವಿಕೆಗೆ ಸಂಬಂಧಿಸಿದ ನೀತಿ ನಿಯಮಗಳು, ಅವರ ಹಾಗೂ ಅವರ ಅವಲಂಬಿತರ ಬಲವರ್ಧನೆ ನಿಟ್ಟಿನಲ್ಲಿ ಆಯೋಗವು ವರದಿಯೊಂದನ್ನು ಈಗಾಗಲೇ ಸಿದ್ದಪಡಿಸುತ್ತಿದೆ. ಶೀಘ್ರದಲ್ಲಿಯೇ ಅದನ್ನು ಭಾರತ ಸರಕಾರಕ್ಕೆ ಸಲ್ಲಿಸಿ, ಅವುಗಳಲ್ಲಿನ ಅಂಶಗಳನ್ನು ಅನುಷ್ಠಾನಗೊಳಿಸುವಂತೆ ಕೋರಲಾಗುವುದು ಎಂದರು.
ರಾಜ್ಯದಲ್ಲಿನ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೇಡಿಕೆಗಳಿರುವ ವರದಿಯೊಂದನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಲ್ಕೈದು ದಿನಗಳ ಹಿಂದೆ ಸಲ್ಲಿಸಲಾಗಿದ್ದು, ಇವುಗಳನ್ನು ಪರಿಶೀಲಿಸಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಇದಕ್ಕೆ ಸಂಬಂಧಿಸಿದಂತೆ ಚಚರ್ಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು. ಮಲಹೊರುವ ಪದ್ಧತಿ ನಿಷೇಧಿಸಿದ ಸಂದರ್ಭದಲ್ಲಿ ತಲೆಯ ಮೇಲೆ ಮಲಹೊರುವ ಜಾಡಮಾಲಿಗಳಿಗಾಗಿ ಸರಕಾರವು ಊರಿನ ಹೊರಗೆ ವಸತಿಗೃಹಗಳನ್ನು ನಿಮರ್ಿಸಿತ್ತು. ಅವುಗಳ ಸಂಖ್ಯೆ 3 ಸಾವಿರದಷ್ಟಿದೆ. ಅವರಲ್ಲಿ ಕೆಲವರು ತೀರಿಕೊಂಡು ಅವರ ಅವಲಂಬಿತರು ಆ ಮನೆಯಲ್ಲಿದ್ದಾರೆ. ಇನ್ನೂ ಕೆಲವರು ಜೀವಂತವಿದ್ದಾರೆ. ಆದರೇ ಅವರಿಗೆ ಆ ಮನೆಗಳಿಗೆ ಸಂಬಂಧಿಸಿದ ಹಕ್ಕುಪತ್ರಗಳು ಇದುವರೆಗೆ ನೀಡಿಲ್ಲ. ಕೂಡಲೇ ಅವರಿಗೆ ಹಕ್ಕು ಪತ್ರ ಒದಗಿಸುವ ವ್ಯವಸ್ಥೆ ಮಾಡಬೇಕು. ಪೌರ ಕಾಮರ್ಿಕರ ಕಾಯಂ ನೇಮಕಾತಿ ಪ್ರಕ್ರಿಯೆಯನ್ನು ಈ ತಿಂಗಳೊಳಗೆ ಎಲ್ಲ ಜಿಲ್ಲೆಗಳಲ್ಲಿ ಪೂರ್ಣಗೊಳಿಸಬೇಕು. ಸ್ಮಶಾನದಲ್ಲಿ ಕೆಲಸ ನಿರ್ವಹಿಸುವ ಕಾಮರ್ಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಕನಿಷ್ಠ 20 ಸಾವಿರ ರೂ. ಸಂಬಳ ಸಿಗುವ ವ್ಯವಸ್ಥೆಯನ್ನು ಸರಕಾರ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ರಾಜಪ್ಪ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಸಕೀನಾ ಮತ್ತಿತರರು ಇದ್ದರು.