ರಾಣೆಬೆನ್ನೂರ

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್

ರಾಣಿಬೆನ್ನೂರ:17 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ಬಜೆಟ್ ರೈತ ವಿರೋಧಿ ಹಾಗೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಇದಾಗಿದೆ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿರುವ ಬಜೆಟ್ ಇದಾಗಿದೆ. ಒಟ್ಟಾರೆ ಬಜಟ್ ನಿರಾಶದಾಯಕವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಹಾವೇರಿ. ಮಾಜಿ ಶಾಸಕರು ರಾಣಿಬೆನ್ನೂರ. ಅರುಣಕುಮಾರ ಪೂಜಾರ ಹೇಳಿದ್ದಾರೆ. 


ಸುದ್ದಿ ಓದಿ