ಮದ್ಯ ಮಾರಾಟ ನಿಷೇಧ
ಬಳ್ಳಾರಿ,ಜು.09: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಬಳ್ಳಾರಿ ಇದರ ಕಾರ್ಯವ್ಯಾಪ್ತಿಯ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಒಕ್ಕೂಟದ ಆಡಳಿತ ಕಚೇರಿಯ 02 ಕಿ.ಮೀ ವ್ಯಾಪ್ತಿಯಲ್ಲಿ ಜುಲೈ 09 ರಂದು ಸಂಜೆ 06 ಗಂಟೆಯಿಂದ ಜುಲೈ 11 ರ ಬೆಳಿಗ್ಗೆ 06 ಗಂಟೆಯವರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಮದ್ಯ ಮಾರಾಟ, ಸಾಗಣಿಕೆ ಮಾಡದಂತೆ ಹಾಗೂ ಮದ್ಯ ಅಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆ.ಎಸ್.ಪಿ.ಬಿ.ಸಿ.ಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 