ಬಳ್ಳಾರಿ

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

           ಬಳ್ಳಾರಿ 27:  ಬಳ್ಳಾರಿ ನಗರದಲ್ಲಿ ನವೆಂಬರ್ 28 ರಂದು 13 ಪರೀಕ್ಷಾ ಕೇಂದ್ರಗಳಲ್ಲಿ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ  ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ. 

ಜವಾಹರ್ ನವೋದಯ ವಿದ್ಯಾಲಯ ಪ್ರವೇಶ  ಪರೀಕ್ಷೆಗಳು 28 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿಬಂರ್ಧಿತ ಪ್ರದೇಶವೆಂದು ಘೋಷಿಸಲಾಗಿದೆ. 

ಈ ವ್ಯಾಪ್ತಿಯಲ್ಲಿ ಜೆರಾಕ್ಸ್‌ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ ಗಳನ್ನು ಕಾರ್ಯನಿರ್ವಹಿಸದಂತೆ ನಿಬಂರ್ಧಿಸಲಾಗಿದೆ. ನಿಬಂರ್ಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ