ಸಾಂಕ್ರಾಮಿಕ ರೋಗಗಳಿಂದ ಮಕ್ಕಳನ್ನು ಕಾಪಾಡಿ: ಕೊಟಾರಗಸ್ತಿ
ಉಗರಗೋಳ 31: ಅಂಗವಿಕಲತೆ ಸೇರಿದಂತೆ ಹಲವು ಸಂಕ್ರಾಮಿಕ ರೋಗಗಳು ಬಹು ಬೇಗ ಮಕ್ಕಳಲ್ಲಿ ಹರಡುತ್ತಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವದು ಸೂಕ್ತ. ಎಂದು ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಹೇಳಿದರು.
ಶ್ರೀಕ್ಷೇತ್ರ ಶ್ರೀಯಲ್ಲಮ್ಮನ ಗುಡ್ಡದಲ್ಲಿ ಪೋಲಿಯೋ ನಿರ್ಮೂಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪೋಲಿಯೋ ನಿರ್ಮೂಲನೆಯ ನಿಟ್ಟಿನಲ್ಲಿ ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ 2 ಹನಿ ಪಲ್ಸ್‍ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಹೇಳಿದರು.
ದೇವಸ್ಥಾನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ರವಿಂದ್ರ ಮಾಳಗೆ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ಸಿದ್ದು ಪಾಟೀಲ, ಸವದತ್ತಿ ಆರೋಗ್ಯೆ ಕೇಂದ್ರದ ಸಿಬ್ಬಂದಿ, ದೇವಸ್ಥಾನ ಸಿಬ್ಬಂದಿ ಇದ್ದರು.