ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ರವಿಂದ್ರ

ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ರವಿಂದ್ರ  Protecting the environment is everyone's primary duty: Ravindra

ಶಿಗ್ಗಾವಿ  06: ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪರಿಸರ ರಕ್ಷಣೆಯಿಂದ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ ಹೇಳಿದರು.   ಪಟ್ಟಣದ ಶ್ರೀಮಂತ ಬಸವಂತರಾವ ಬುಳ್ಳಪ್ಪ ಮಾಮಲೇ ದೇಸಾಯಿ ಪ.ಪೂ ವಿದ್ಯಾಲಯ ಹಾಗೂ ಪುರಸಭೆ ಕಾರ್ಯಾಲಯದ ಸಹಯೋಗದಲ್ಲಿ ನಡೆದವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದ ಅವರು ಪ್ರತಿಯೊಬ್ಬರೂ ಪ್ಲಾಸ್ಟಿಕ್ ತ್ಯಜಿಸಿ, ಮರುಬಳಕೆ ವಸ್ತುಗಳನ್ನು ಉಪಯೋಗಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಅಲ್ಲದೇ ಅಭಿವೃದ್ಧಿಯ ಹೆಸರಿನಲ್ಲಿ ಗಿಡ-ಮರಗಳ ಮಾರಣಹೋಮ ನಡೆಯುತ್ತಿದೆ.

ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಇತರರಿಗೂ ಗಿಡ ನೆಡುವಂತೆ ಪ್ರೋತ್ಸಾಹಿಸಬೇಕು. ಜೊತೆಗೆ ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಹಸಿ ಕಸ ಹಾಗೂ ಒಣ ಕಸವನ್ನು ಬೇರಿ​‍್ಡಸಿ  ಕಸ ಸಂಗ್ರಹಣಾ ವಾಹನದಲ್ಲಿ ಹಾಕುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಇದರಿಂದ, ಶುದ್ಧ ವಾತಾವರಣ ನಿರ್ಮಿಸಲು ಸಾಧ್ಯ ಎಂದು ಹೇಳಿದರು.   ಶಾಲಾ ವಿದ್ಯಾರ್ಥಿಗಳು ಹಾಗೂ ಪುರಸಭೆ ಸಿಬ್ಬಂದಿಗಳಿಂದ ಪರಿಸರ ಜಾಗೃತಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪವನ್ ಚಿಮ್ಮಲಗಿ, ಬಸವರಾಜ ಸವಡಿ, ಸುನಿಲಕುಮಾರ ಕಡೆಮನಿ, ಸೇರಿದಂತೆ ಪುರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.