ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
Protection of cows being transported to the slaughterhouse
ಬಳ್ಳಾರಿ 27: ನಗರದಲ್ಲಿ ಕಸಾಯಿ ಖಾನೆಗೆ ಸಾಗಿಸಲು ಸಿದ್ಧವಾಗಿದ್ದ ಎನ್ನಲಾದ ಐವತ್ತಕ್ಕೂ ಹೆಚ್ಚು ಗೋವುಗಳನ್ನು ನಗರದಲ್ಲಿ ಕೌಲಬಜಾರ್ ಪೊಲೀಸರು ರಕ್ಷಣೆ ಮಾಡಿದ್ದಾರೆ.ನಗರದ ಹಳೇ ಬೈಪಾಸ್ ರಸ್ತೆಯ ಗೋಲಬಡಿ ಮಾರ್ಗದಲ್ಲಿರುವ ಕೊಟ್ಟಿಗೆಯೊಂದರಲ್ಲಿ ಗೋವುಗಳನ್ನು ಕೂಡಿಹಾಕಿ ಇರಿಸಲಾಗಿದೆ ಎಂಬ ಮಾಹಿತಿ ಮೇರೆಗೆ ಹಿಂದೂ ಸಂಘಟನೆಗಳ ಮುಖಂಡರು ಪೊಲೀಸರಿಗೆ ದೂರು ನೀಡಿದ್ದರು. ಮಾಹಿತಿ ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಪರೀಶೀಲನೆ ನಡೆಸಿದರು.\
ಈ ವೇಳೆ ಕೊಟ್ಟಿಗೆಯಲ್ಲಿ ಐವತ್ತಕ್ಕೂ ಹೆಚ್ಚು ಗೋವುಗಳು ಪತ್ತೆಯಾಗಿದ್ದು, ಅವುಗಳನ್ನು ಏಕೆ ಸಂಗ್ರಹಿಸಿಡಲಾಗಿತ್ತು ಎಂಬುದಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದವರು ಪೊಲೀಸರಿಗೆ ಸಮರ್ಕ ಉತ್ತರ ನೀಡಿಲ್ಲ ಎನ್ನಲಾಗಿದೆ.ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸಲು ಸಂಗ್ರಹಿಸಿಡಲಾಗಿತ್ತು ಎಂದು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗೋವುಗಳ ಸುರಕ್ಷತೆಗಾಗಿ ಅವುಗಳನ್ನು ಗೋಶಾಲೆಗೆ ರವಾನೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 