ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಅಬ್ದುಲ್ ನಬಿ
ಸಿರುಗುಪ್ಪ; ನಮ್ಮ ಸಂವಿಧಾನದಲ್ಲಿ ಪ್ರತಿಷ್ಠಾಪಿಸಿದಂತೆ ಸಂವಿಧಾನಕ್ಕೆ ಮತ್ತು ಅದರ ಆದರ್ಶಗಳನ್ನು ಮತ್ತು ಸಂಸ್ಥೆಗಳನ್ನು ಗೌರವಿಸುವುದು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗಳಿಗೆ ಬದ್ಧರಾಗಿರುವದು ರಾಷ್ಟ್ರದ ಪ್ರತಿಯೊಬ್ಬ ನಾಗರಿಕರ ಮೂಲಭೂತ ಕರ್ತವ್ಯ ವಾಗಿರುತ್ತದೆ ಎಂದು ರಾಷ್ಟ್ರೀಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಮೈಸೂರು ಜಾತ್ಯಾತೀತ ಮಾನವ ಭಾವೈಕ್ಯ ಸಿರಿ ಸಾಕ್ಷರತಾ ಹರಿಕಾರ ಸಮಾಜ ಸುಧಾರಕ ಎ ಅಬ್ದುಲ್ ನಬಿ ಅವರು ಹೇಳಿದರು.
ನಗರದ ಇಬ್ರಾಹಿಂ ಮಂಜಿಲ್ ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ 30ನೇ ದಿನ ವನ್ನು ಅವರು ನೆನಪಿಸಿ ಮಾತನಾಡುತ್ತಾ ಮಾನವ ಹಕ್ಕುಗಳ ಪರಿಧಿ ವ್ಯಾಪಕ ಸ್ವರೂಪದ್ದು ಅದು ನಾಗರಿಕ ರಾಜಕೀಯ ಸಾಂಸ್ಕೃತಿಕ ಮತ್ತು ಆರ್ಥಿಕ ಹಕ್ಕುಗಳನ್ನು ಒಳಗೊಂಡಿರುವುದು ಇವುಗಳಲ್ಲಿ ಅತಿ ಮುಖ್ಯವಾದವು ಸಮಾನತೆಯ ಹಕ್ಕು ಸಮಾನ ಕಾನೂನು ರಕ್ಷಣೆ ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು ತಮ್ಮ ಆಯ್ಕೆಯ ವೃತ್ತಿ ಕಲಿಕೆಯ ಹಕ್ಕು ಭಾರತದ ಯಾವುದೇ ಸ್ಥಳಕ್ಕೆ ಹೋಗಲು ಮತ್ತು ಅಲ್ಲಿ ವಾಸಿಸಲು ಆತ್ಮಸಾಕ್ಷಿ ಸ್ವಾತಂತ್ರ್ಯ ನಂಬಿಕೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಸ್ಪೃಶ್ಯತೆ ಅಥವಾ ಜಾತಿ ಮತ ಅಥವಾ ಲಿಂಗ ಆಧಾರಿತ ತಾರತಮ್ಯದಿಂದ ಮುಕ್ತಿ ಈ ಮಹತ್ತರ ಚಿಂತನೆಯ ಮೇರೆಗೆ ಮಾನವ ಹಕ್ಕುಗಳ ರಕ್ಷಣೆಗೆ ಮತ್ತು ಅವುಗಳ ಪರಿಣಾಮಕಾರಿ ಜಾರಿಗಾಗಿ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆ 1993ರ ಅನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಗಳನ್ನು ರಚನೆ ಮಾಡಲಾಗಿದೆ ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಣೆ ರಕ್ಷಿಸುವುದು ರಾಜ್ಯ ದ ಮತ್ತು ಇದರ ಎಲ್ಲಾ ಸಂಸ್ಥೆಗಳ ಆಧ್ಯ ಕರ್ತವ್ಯ ರಾಜ್ಯದ ಯಾವುದೇ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿಂದಾಗಲಿ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ ತೊಂದರೆಗೆ ಒಳಗಾದವರಾಗಲಿ ಅಥವಾ ಆತನ ಆಕೆಯ ಪರವಾಗಿ ಬೇರೆ ಯಾರಾದರಾಗಲಿ ಅವರ ಕುಂದು ಕೊರತೆಗಳನ್ನು ಪರಿಹರಿಸಲು ನ್ಯಾಯ ದೊರಕಿಸಿಕೊಳ್ಳಲು ಕರ್ನಾ ಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಬೆಂಗಳೂರು ದೂರವಾಣಿ :080-22392201, ಇ-ಮೇಲ್ : kshrc2007@gmail.com ಗೆ ಸಂಪರ್ಕಿಸಬಹುದು ಎಂದು ಅಬ್ದುಲ್ ನಬಿ ತಿಳಿಸಿದರು.