ಕಾಂಗ್ರೆಸ್ನಿಂದ ಮಾತ್ರ ಅಲ್ಪಸಂಖ್ಯಾತರ ರಕ್ಷಣೆ:ಅಬ್ದುಲ್ ಜಫರ್ ಸಾಬ್
ಯಲಬುರ್ಗಾ 02: 'ಅಲ್ಪಸಂಖ್ಯಾತರ ರಕ್ಷಣೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜನರು ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಜಫರ್ ಸಾಬ್ ವಾಗ್ದಾಳಿನಡೆಸಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
'ಕಾಂಗ್ರೆಸ್ ಸರ್ಕಾರ ಇದ್ದಾಗ ಅಲ್ಪಸಂಖ್ಯಾತರ ಹಿತ ರಕ್ಷಣೆಗಾಗಿ ಜಾರಿಗೊಳಿಸಿದ್ದ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ಬಿಜೆಪಿ ಸಕರ್ಾರ ನಿಲ್ಲಿಸಿದೆ. ಧರ್ಮದ ವಿಷ ಬೀಜ ಬಿತ್ತಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ. ಕೋಮು ಭಾವನೆ ಕೆರಳಿಸುವುದು ಬಿಜೆಪಿಯ ಅಭಿವೃದ್ಧಿಯ ಮಂತ್ರದ ಜೊತೆಗೆ ತಂತ್ರವು ಅಡಗಿದೆ ಎಂದು ಆರೋಪಿಸಿದರು.'ಮುಸ್ಲಿಂ ಸಮುದಾಯದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಕೆಲಸದ ಪಟ್ಟಿಯನ್ನು ಪರಿಶೀಲಿಸಬೇಕು.
ಈ ಚುನಾವಣೆಯಲ್ಲಿ ಈ ಕ್ಷೇತ್ರದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಬೆಂಬಲಿಸಬೇಕು' ಎಂದು ಹೇಳಿದರು.ಂಅಅ ಸಂಯೋಜಕಿ ಜೀನಾಲ ಘಾಲಾ ಮಾತನಾಡಿ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು. ಕೋಮುವಾದಿ ಬಿಜೆಪಿಯನ್ನು ಕಿತ್ತು ಹಾಕಬೇಕು. ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರಿಗೆ ಕೊಟ್ಟಿರುವ ಅನುದಾನ ಹಾಗೂ ಸೌಲಭ್ಯವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅಧಿಕಾರದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು, ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಹೇಳಿದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡಿ ಮಾತನಾಡ ಅವರು, ದೇಶದಲ್ಲಿ ಮೋದಿ ಸರ್ಕಾ ರ ಚುನಾವಣೆ ಬಂದಾಗ ಅಗತ್ಯ ವಸ್ತುಗಳ ಬೆಲೆ ಇಳಿಕೆ, ಚುನಾವಣೆ ಬಳಿಕ ಏರಿಕೆ ಸಾಮಾನ್ಯವಾಗಿದೆ.
ಎಲ್ಪಿಜಿ, ಪೆಟ್ರೋಲ್, ಡೀಸೆಲ್ ಸೇರಿದಂತೆ ದಿನಬಳಕೆ ವಸ್ತುಗಳು ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದರು.ಕಾರ್ಯಕ್ರಮದ ಪ್ರಸ್ತಾವಿಕ ನುಡಿಯನ್ನು ಅತ್ತಾರ್ ಸಾಬ್ ಖಾಜಿ ನೆರವೇಸಿದರು.ಈ ವೇಳೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಉಪಾಧ್ಯಕ್ಷ ಇಮಾಜ್, ಕೊಪ್ಪಳ ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷ ಸಲೀಂ ಅಳವಂಡಿ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸಿರಾಜ್, ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಆಹ್ಮಜದು ಪಟೇಲ್, ಬ್ಲಾಕ್ ಕಾಂಗ್ರೆಸ್ ವಕ್ತಾರ ಡಾ.ಶಿವನಗೌಡ ದಾನರೆಡ್ಡಿ, ಎಂ.ಎನ್.ನದಾಫ್, ರೈಮನ್ ಸಾಬ್ ನಾಯಕ್, ಇಮಾಮ ಸಾಬ್ ಕರಮುಡಿ, ಈಶ್ವರ ಅಟಮಾಳಗಿ, ಮಲ್ಲು ಜಕ್ಕಲಿ, ಸೇರಿದಂತೆ ಮತ್ತಿತರರು ಇದ್ದರು.