ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಚೇರಿ ಎದುರು ಭಿತ್ತಿಚಿತ್ರ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ
Protest against the government by displaying a poster in front of the Students Federation of India (
ಲೋಕದರ್ಶನ ವರದಿ
ಹಾವೇರಿ: ಸರ್ಕಾರಿ ಕಾನೂನು ಮಹಾವಿದ್ಯಾಲಯ ಆಮೆಗತಿ ಕಟ್ಟಡ ನಿರ್ಮಾಣ, ಶಾಸಕರ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯ, ವಿಳಂಬ ಖಂಡಿಸಿ, ಕಳಪೆ ಕಾಮಗಾರಿ ಪರೀಶೀಲನೆ ನಡೆಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಎಸ್‌ಎಫ್‌ಐ ಕಚೇರಿ ಎದುರು ಭಿತ್ತಿಚಿತ್ರ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ ನೂರಾರು ವಿದ್ಯಾರ್ಥಿಗಳು ಇವತ್ತು ಪದವಿ ಮುಗಿಸಿ ಉನ್ನತ ಶಿಕ್ಷಣ ಪಡೆಯಬೇಕು ಅದರಲ್ಲೂ ವಕೀಲರಾಗಬೇಕೆಂದು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ ಹಾವೇರಿ ಜಿಲ್ಲೆಯ ರಚನೆಗೊಂಡು 27 ವರ್ಷ ಕಳೆದರು ಸರ್ಕಾರಿ ಕಾನೂನು ಕಾಲೇಜು ಇಲ್ಲದೆ ಬೇರೆ ಬೇರೆ ಜಿಲ್ಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುವಂತಾಗಿದೆ.
ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಖಾಸಗಿ ಕಾನೂನು ಕಾಲೇಜ್ ಇದ್ದು ಅದು ರಾಣೇಬೆನ್ನೂರ ನಲ್ಲಿರುವದರಿಂದ ಬೇರೆ ಬೇರೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸೀಟ್ ಸಿಗದಿರುವುದು ಹಾಗೂ ಸರ್ಕಾರಿ ಶುಲ್ಕ ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುವುದರಿಂದ ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಪಡೆಯುವುದು ಅಸಾಧ್ಯವಾಗಿದೆ. ಅನಿವಾರ್ಯವಾಗಿ ದಾವಣಗೆರೆ, ಹುಬ್ಬಳ್ಳಿ ಧಾರವಾಡ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಮೊರೆ ಹೋಗುತ್ತಿದ್ದಾರೆ.ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ನಚಿವರು ಈತ ಗಮನಾರ್ಹಸಿ ಪ್ರಸಕ್ತ ವರ್ಷದಲ್ಲೇ ನಗರದ ಮುನ್ಸಿಪಲ್ ಮೈದಾನದ ಹತ್ತಿರದ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಕಾನೂನು ತರಗತಿಗಳನ್ನು ಪ್ರಾರಂಭಿಸುವಂತೆ ಎಸ್‌ಎಫ್‌ಐ ಆಗ್ರಹಿಸುತ್ತದೆ ಎಂದರು.
ಎಸ್‌ಎಫ್‌ಐ ಜಿಲ್ಲಾ ಮುಖಂಡ ಅರುಣ್ ಕುಮಾರ್ ನಗವತ್,ಚೈತ್ರಾ ಕೊರವರ ಮಾತನಾಡಿ ಖಾಸಗಿ ಕಾಲೇಜ್ ಗಳಿಗೆ ಅನುಮತಿ ನೀಡುವ ಸರ್ಕಾರ ತನ್ನದೇ ಸರ್ಕಾರಿ ವಿದ್ಯಾಲಯ ಪ್ರಾರಂಭಿಸಲು ಹಿಂದೇಟು ಹಾಕುವಂತೆ ಕಾಣಲು ಜಮಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ. ಶೀಘ್ರವಾಗಿ ಕಟ್ಟಡ ನಿರ್ಮಾಣ ಮಾಡಿ, ಇಲ್ಲವೇ ಪರ್ಯಾಯವಾಗಿ ಬೇರೆ ಯಾವುದಾದರೂ ಒಂದು ಸರ್ಕಾರಿ ಕಾಲೇಜ್ ಗಳಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಂಡು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಬೇಕು. ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣ ನಾಯ್ಕ್, ಧನುಷ್ ದೊಡ್ಡಮನಿ, ಪಂಚಾಕ್ಷರಿ ಎಮ್ ಕೋಡಿಹಾಳ, ಸಂದೀಪ್ ಜಿ ಹಳೆಮನೆ ಉಪಸ್ಥಿತರಿದ್ದರು.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 