ಹತ್ರಾಸ್ ಪ್ರಕರಣ : ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಕೊಲ್ಹಾಪುರ, ಅಕ್ಟೋಬರ್ 05: ಹತ್ರಾಸ್ ಯುವತಿಯ ಹತ್ಯೆ ಘಟನೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ರಾಜ್ಯವ್ಯಾಪಿ ಸತ್ಯಾಗ್ರಹ ಹಮ್ಮಿಕೊಂಡಿರುವ ಭಾಗವಾಗಿ ಕಾರ್ಯಕರ್ತರು ಸೋಮವಾರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಮತ್ತೊಂದು ನಿರ್ಭಯಾ ಪ್ರಕರಣದಂತಿರುವ ಆಘಾತಕಾರಿ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಯಿಂದ ನಿರ್ಗಮಿಸಿಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಡಿಎಸ್ ಪಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪಾಟೀಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಕ್ತ ರೀತಿಯಲ್ಲಿ ವರ್ತಿಸುತ್ತಿಲ್ಲ. ಪ್ರಧಾನಿ ಹಾಗೂ ಮುಖ್ಯಮಂತ್ರಿ ಈ ಘಟನೆಗೆ ಪರೋಕ್ಷವಾಗಿ ಕಾರಣರಾಗಿರುವುದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.