ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬೆಂಬಲಿಸಿ ಅಂಬೇಡ್ಕರ್ ಸರ್ಕಲ್ನಲ್ಲಿ ಪ್ರತಿಭಟನೆ
Protest at Ambedkar Circle in support of Home Minister Priyank Kharge's statement
ಲೋಕದರ್ಶನ ವರದಿ
ಜಮಖಂಡಿ 20 : ರಾಜ್ಯ ಸರ್ಕಾರದ ಗೃಹ ಸಚಿವ ಪ್ರೀಯಾಂಕ ಖರ್ಗೆ ಅವರು ಆರ್ಎಸ್ಎಸ್ ಸಂಘ ನೋಂದಣೆ ಆಗಿದಿರುವ ಕುರಿತು ನೀಡಿರುವ ಹೇಳಿಕೆಯನ್ನು ಬೆಂಬಲಿಸಿ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆರ್ಎಸ್ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಗಳ ಮುಖಂಡರು ಮಾತನಾಡಿ, "ಪ್ರಿಯಾಂಕ್ ಖರ್ಗೆ ಅವರು ಸತ್ಯವನ್ನು ಹೇಳಿದ್ದಾರೆ. ಆರ್ಎಸ್ಎಸ್ ನೋಂದಣಿ ಆಗದೆ ಇರುವ ಸಂಘವಾಗಿದೆ. ಸ್ವಯಂಸೇವಕ ಸಂಘವು ನೋಂದಣಿಯಾಗಿರುವ ಕುರಿತು ದಾಖಲೆಗಳನ್ನು ಸಾರ್ವಜನಿಕವಾಗಿ ನೀಡಬೇಕು ಎಂದು ಅವರು ಧ್ವನಿ ಎತ್ತಿದ್ದಾರೆ.
ಅವರ ವಿರುದ್ಧ ಮಾತನಾಡುವ ನೈತಿಕತೆ ಆರ್ಎಸ್ಎಸ್ ಮುಖಂಡರಿಗೆ ಇಲ್ಲ ಎಂದು ಆರೋಪಿಸಿ. ದಲಿತಪರ ಸಂಘಟನೆಗಳು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪರವಾಗಿ ನಿಲ್ಲುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಸಂವಿಧಾನ ಮತ್ತು ಕಾನೂನಿನ ಆಳ್ವಿಕೆ ಉಳಿಯಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಎಲ್ಲ ಸಂಘಟನೆಗಳೂ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಗೃಹ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 