ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ
ಬೈಲಹೊಂಗಲ ೦೧: ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ತಪ್ಪಿದಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕದ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಕಿತ್ತೂರ ಚನ್ನಮ್ಮ ಸಮಾಧಿಯಿಂದ ಬಜಾರ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿದ ವಿದ್ಯಾರ್ಥಿಗಳು ಸರಕಾರದ ವಿರುದ್ಧ ಘೋಷಣೆ ಕೂಗಿದರು. ವೀಡಿಯೋ ಚಿತ್ರೀಕರಣ ಮಾಡಿದ ವಿದ್ಯಾರ್ಥಿನಿಯರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕಾಗಿದ್ದ ಪೋಲಿಸ್ ಇಲಾಖೆ, ಯಾವುದೋ ಒತ್ತಡಕ್ಕೆ ಮಣಿದು ಈ ಘಟನೆ ಬಗ್ಗೆ ಇರುವ ಸತ್ಯಸತ್ಯಾತೆಯು ಹೊರಬರದಂತೆ ತಡೆದಿದ್ದಾರೆ. ಎಬಿವಿಪಿ ಮತ್ತು ನಾಗರೀಕ ಸಮಾಜದ ತೀವ್ರ ವಿರೋಧ ಹಾಗೂ ವಿದ್ಯಾರ್ಥಿ ಪರಿಷತ್ ಹೋರಾಟಕ್ಕೆ ಕರೆ ನೀಡಿದ ನಂತರ ಪ್ರಕರಣ ದಾಖಲಿಸಿಲಾಗಿದೆ. ಪೋಷಕರು ವಿದ್ಯಾರ್ಥಿನಿಯರನ್ನು ವಿದ್ಯಾಭ್ಯಾಸ ಮಾಡಿಸಲು ಆತಂಕಕ್ಕೊಳಗಾಗಿದ್ದಾರೆ .ಈ ಪ್ರಕರಣದ ಆರೋಪಿಗಳನ್ನು ಯಾವುದೇ ಒತ್ತಡಕ್ಕೆ ಮಣಿಯದೆ ಪೋಲಿಸ ಇಲಾಖೆಯು ಸೂಕ್ತ ರೀತಿಯ ತನಿಖೆಗೆ ಒಳಪಡಿಸಬೇಕು, ಸರ್ಕಾರವು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡದೇ ಸತ್ಯಾಸತ್ಯತೆಯು ಹೊರತರುವ ಕೆಲಸ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಈ ರೀತಿಯ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ವಿದ್ಯಾರ್ಥಿಗಳು ಅಗ್ರಹಿಸಿದರು. ಎಬಿವಿಪಿ ಉತ್ತರ ಕರ್ನಾಟಕ ಪ್ರಾಂತ್ಯ ಪ್ರಮುಖ ಅಪ್ಪಣ್ಣ ಹಡಪದ, ವಿದ್ಯಾರ್ಥಿ ಪ್ರಮುಖ ಭರತ ಹುಲಮನಿ, ನಗರ ಕಾರ್ಯದರ್ಶಿ ಗಂಗಾಧರ ಕರೆಪ್ಪಗೋಳ, ನಾಗರಾಜ ಕುರುಬರ,ಸುವರ್ಣ ಅಬ್ಬಾಯಿ, ಲಕ್ಷ್ಮೀ ಶೇರಖಂಡ, ಕಾವೇರಿ ತಾರಿಹಾಳ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.ಪೊಟೊ ಕ್ಯಾಪ್ಸನ: ಉಡುಪಿಯ ಖಾಸಗಿ ಪ್ಯಾರ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.