ಬಳ್ಳಾರಿ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ವತಿಯಿಂದ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌ವತಿಯಿಂದ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಬಳ್ಳಾರಿ 16: ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಮುಂಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ (ಂಋಗಅ) ವತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು.  

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಆರ್ಕಾಣಿ ತಮ್ಮ ಬೇಡಿಕೆಗಳನ್ನು ಉದ್ದೇಶಿಸಿ ಮಾತನಾಡುತ್ತಾ ಈ ಜಿಲ್ಲಾಮಟ್ಟದ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿರುವ   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಳೆದ 48 ವರ್ಷಗಳಿಂದ,  ಶೂನ್ಯದಿಂದ 6 ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಲಾಲನೆ-ಪಾಲನೆ, ಪೌಷ್ಠಿಕ ಆಹಾರ, ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಇದೀಗ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಎಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ ಸುಮಾರು 500 ಮಂದಿ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು  ಕಾರ್ಯನಿರ್ವಹಿಸುತ್ತಿವೆಯೋ ಅದೇ ಪ್ರದೇಶಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು, ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದು ಅಂಗನವಾಡಿ ಕೇಂದ್ರಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದದ್ದರಿಂದ ಆರನೇ ಗ್ಯಾರಂಟಿ ಜಾರಿಗೊಳಿಸಿವಂತೆ  ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿಯವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಅಂಗನವಾಡಿ ಸಂಘಟನೆಯ ನಾಯಕರೊಂದಿಗೆ ಸಮಾಲೋಚಿಸಿ ಗೌರವ ಧನವನ್ನು ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ಹೆಚ್ಚಿಸುವ ಹಾಗೂ ನಿವೃತ್ತರಿಗೆ ಇಡುಗಂಟು 3 ಲಕ್ಷ ರೂಪಾಯಿ ನೀಡುವ ಭರವಸೆಯನ್ನು ಸರ್ಕಾರದ 6ನೇ ಗ್ಯಾರಂಟಿಯಾಗಿ ಘೋಷಿಸಿದ್ದು ಇದನ್ನು ರಾಜ್ಯ ಸರ್ಕಾರ ಕೂಡಲೇ ಘೋಷಿಸಿರುವ ಭರವಸೆಯನ್ನು ಈಡೇರಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸುತ್ತೇವೆ.ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಮಾತನಾಡಿದರು. 

   ತರುವಾಯ  ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಈ ಮಂಗಮ್ಮ ಅವರು ಮಾತನಾಡುತ್ತಾ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಅಂಗನವಾಡಿ ವ್ಯವಸ್ಥೆಗಳನ್ನು ಕಳಗೊಳಿಸಿ ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಇಂದಿನ ದಿನದಂದು ದಯಮಾಡಿ ಬಗೆಹರಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

  ಈ ಪ್ರತಿಭಟನೆಯ  ಕಾರ್ಯಕ್ರಮದಲ್ಲಿ ಎಆರ್‌ಎಂ ಇಸ್ಮಾಯಿಲ್ ಕಾನೂನು ಸಲಹೆಗಾರರು, ಪಿ ಡಿ ಮೀನಾ ಕುಮಾರಿ, ಟಿ ಇಂದಿರಾ, ಸ್ವರೂಪರಾಣಿ, ನಾಗರತ್ನಮ್ಮ, ಕವಿತಾ, ಸೌಭಾಗ್ಯ, ಡಿ ಕೆ ಶಾರದ, ಶಿವಗಂಗಮ್ಮ, ರತ್ನಮ್ಮ, ಕಲಾವತಿ, ಮಂಗಳಗೌರಿ, ಪದ್ಮಾವತಿ ಸುನಿತಾ ಜಗದೀಶ್ವರಿ, ಕೊಂಡಮ್ಮ, ರೇಣುಕಾ, ಶಕುಂತಲಾ, ಸರಸ್ವತಿ, ಇನ್ನು ಮುಂತಾದ ಅಂಗನವಾಡಿ ಕಾರ್ಯಕರ್ತರು ಸಹಾಯಕಿಯರು ವಿವಿಧ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು. 

 ಬೇಡಿಕೆಗಳು: 1. ಅಂಗನವಾಡಿ ವ್ಯವಸ್ಥೆಗೆ ವಿರುದ್ಧವಾಗಿ ಹಾಗೂ ಪರ್ಯಾಯವಾಗಿ ಶಿಶುಪಾಲನಾ ಕೇಂದ್ರಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹೊರಡಿಸಿರುವ ಆದೇಶಗಳನ್ನು ವಾಪಸ್ಸು ಪಡೆದು ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ತರಗತಿಗಳನ್ನು (ಎಲ್‌ಕೆಜಿ ಯುಕೆಜಿ) ನಡೆಸಲು ವಿಶೇಷ ಸವಲತ್ತುಗಳನ್ನು ಒದಗಿಸಬೇಕು. 2. ಗ್ರಾಚ್ಯುಟಿ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್‌ ನೀಡಿರುವ ತೀರ​‍್ಪನನು ರಾಜ್ಯದಲ್ಲಿ ಜಾರಿಗೊಳಿಸಲು ಈವರೆಗೆ ನಿವೃತ್ತರಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ನೀಡಲು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು. 3. ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಕಾರ್ಯಕರ್ತೆಯರಿಗೆ 50 ಸಾವಿರ ರೂಪಾಯಿ ಮತ್ತು 30 ಸಾವಿರ ರೂಪಾಯಿ ನೀಡುವ ಆದೇಶವಿದ್ದು, ಇದನ್ನು ಕಾರ್ಯಕರ್ತೆ ಮತ್ತು ಸಹಾಯಕಿಯರ ಬಾಕಿ ಇರುವ ಸೇವೆಗೆ ಗೌರವಧನದೊಂದಿಗೆ ಪಾವತಿ ಮಾಡ ಬೇಕು. 4. ಸಹಾಯಕಿಯರ ಹುದ್ದೆಗೆ ನೇಮಕಾತಿ ಮಾಡುವ ವಿಚಾರದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಿದವರನ್ನು ಸಹಾಯಕಿ ಹುದ್ದೆಗೆ ನೇಮಕ ಮಾಡಬಾರದು. 5. ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಕೇವಲ ಎಸ್‌.ಎಸ್‌.ಎಲ್‌.ಸಿ. ಪಾಸಾದವರಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಕಡಿಮೆ ಓದಿದ ಮಹಿಳೆಯರಿಗೆ ಅನ್ಯಾಯವಾಗುತ್ತದೆ. 6. ಈಗಿರುವ ಸಹಾಯಕಿಯರ ಖಾಲಿ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. 


ಸುದ್ದಿ ಓದಿ