ಜೆಡಿಎಸ್‌ದಿಂದ ಪ್ರತಿಭಟನೆ
ಗುಳೇದಗುಡ್ಡ,ಜು.1:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೈಲ ಬೆಲೆ, ಅಡುಗೆ ಅನಿಲ, ವಿದ್ಯುತ್ ದರ, ರಸ ಗೊಬ್ಬರಗಳ ಬೆಲೆ ಏರಿಕೆಯನ್ನು ಖಂಡಿಸಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ತಹಸೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಣಮಂತ ಮಾವಿನಮರದ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾದಾಮಿ ಮತಕ್ಷೇತ್ರದ ಗುಳೇದಗುಡ್ಡ ತಾಲೂಕಿನ ಜೆಡಿಎಸ್ ಘಟಕದ ಆಶ್ರಯದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದೂ, ಬಾದಾಮಿ ತಾಲೂಕು ಜೆಡಿಎಸ್ ಅಧ್ಯಕ್ಷ ಪ್ರಕಾಶ ಗಾಣಿಗೇರ, ಗುಳೇದಗುಡ್ಡ ತಾಲೂಕು ಅಧ್ಯಕ್ಷ ಬಾಲಪ್ಪ ಹುನಗುಂಡಿ ಸೇರಿದಂತೆ ಮತಕ್ಷೇತ್ರದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹಣಮಂತ ಮಾವಿನಮರದ ತಿಳಿಸಿದ್ದಾರೆ.