ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ
ಬೆಂಗಳೂರು, ಮೇ 9,ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳೂ ಸೇರಿ ಇನ್ನಿತರ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ದೂರಿದ್ದಾರೆ.ಇನ್ನು, ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕು ಅಧಿಕವಾಗಿದ್ದು, ಅಲ್ಲಿಯ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಆಕೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ಓಡಾಡಿದ್ದು, ಹೀಗಾಗಿ ವೈದ್ಯಕೀಯ ಸಿಬ್ಬಂದಿ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.ಆಡಳಿತ ಮಂಡಳಿ ತಮಗೆ ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳಂಥ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಕಾರರು ಪ್ರಶ್ನಿಸುತ್ತಿದ್ದಾರೆ.ವೈದ್ಯಕೀಯ ಸಿಬ್ಬಂದಿ, ಪಿಜಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 