ಪದವಿ ಪೂರ್ವ ಶಿಕ್ಷಣ ಇಲಾಖೆ ಉಳಿವಿಗಾಗಿ ಸಿಬ್ಬಂದಿಗಳಿಂದ ಪ್ರತಿಭಟನೆ
ಸಿಂದಗಿ; ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿ ಕಾಪಾಡುವಂತೆ ಪ್ರಸ್ತುತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಖಂಡಿಸಿ ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿ, ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆ ಸರಿ ಇದೆ ಆದರೆ ಇದರ ನಡುವೆ 3 ಬಾರಿ ಪರೀಕ್ಷೆ ನಡೆಸುವ ನಿರ್ಧಾರ ಅವೈಜ್ಞಾನಿಕವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಎಂದು ಬದಲಾಯಿಸಿದೆ ಬದಲಾಯಿಸಿದರು ಬದಲಾಯಿಸಲಿ ಆದರೆ ಪಿಯು ಇಲಾಖೆಯ ಅಸ್ಥಿತ್ಮವನ್ನು ಕಾಪಾಡಬೇಕು. ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲಿನಗೊಳಿಸುವ ಪರೀಕ್ಷಾ ವಿಭಾಗವನ್ನು ಹಿಂದಕ್ಕೆ ಪಡೆಯಬೇಕು. ಪ್ರತಿ ಜಿಲ್ಲಾ ಹಂತಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿ ನಡೆಸುವ ಸಂಬಂಧ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ವಹಿಸಲು ಹೊರಡಿಸಿರುವ ಸೂತ್ತೋಲೆಯನ್ನು ಹಿಂಪಡೆಯಬೇಕು ಹಾಗೂ ಯಾವುದೇ ಕಾರಣಕ್ಕು ಪಿಯು ಇಲಾಖೆಯನ್ನು ದುರ್ಬಲಗೊಳಿಸುವುದು ಬೇಡ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಇಲಾಖೆ ಸ್ವತಂತ್ರವಾಗಿರಲಿ ಎಂಬ ಅನೇಕ ಬೇಡಿಕೆ ಕುರಿತಾಗಿ ಮಾತನಾಡಿದರು. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಆಲೋಚಿಸಬೇಕು ಎಂದು ಹೇಳಿದರು.
ಪ್ರತಿಭಟನಾ ಮೆರವಣಿಗೆಯು ಸ್ಥಳೀಯ ಎಚ್.ಜಿ.ಕಾಲೇಜಿನಿಂದ ಸಾಗಿ ತಹಶೀಲ್ದಾರ ಕಛೇರಿಗೆ ತಲುಪಿತು ಪ್ರತಿಭಟನಾ ಮೆರವಣಿಗೆಯಲ್ಲಿ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಎಸ್.ಬಿ.ಜಾಧವ, ಟಿ.ಎನ್.ಲಮಾಣಿ, ಜಿ.ವ್ಹಿ.ನಾಯಕ, ಎ.ಬಿ.ಕುಚೇಲ, ವ್ಹಿ.ಡಿ.ಪಾಟೀಲ, ಉಟಗಿ, ಎಸ್.ಎಮ್.ಬಿರಾದಾರ ಮತ್ತು ಅನೇಕ ಉಪನ್ಯಾಸಕರು ಇದ್ದರು.
ಎಸ್ಎನ್ಡಿ1 ಸಿಂದಗಿಯಲ್ಲಿ ವಿವಿಧ ಕಾಲೇಜುಗಳ ಪ್ರಾಚಾರ್ಯರು ಮತ್ತು ಉನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು