ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Protest demanding separate bus facilities for school and college students
ಹೂವಿನಹಡಗಲಿ 04: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಸಮೀಪದ ಹೊಳಗುಂದಿ ಹಾಗೂ ಬಾವಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಶುಕ್ರವಾರ ಹೂವಿನಹಡಗಲಿ ತೆರಳುತ್ತಿದ್ದ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಹೊಳಗುಂದಿ ಗ್ರಾಮದಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಇದೇ ಬಸ್ನ್ನು ಅವಲಂಬಿಸಿದ್ದಾರೆ. ಶುಕ್ರವಾರ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಬಸ್ನಲ್ಲಿ ನಿಂತುಕೊಂಡೇ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವರು ಬಸ್ನ ಬಾಗಿಲಿನ ಹೊರಭಾಗದಲ್ಲಿಯೂ ನಿಂತು ಪ್ರಯಾಣಿಸುವ ಅಪಾಯಕಾರಿ ಸ್ಥಿತಿ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಸಹಕಾರ ನೀಡಿ, ಹೂವಿನಹಡಗಲಿ ಬಸ್ ಡಿಪೋ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ ಮಾಡಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಹೊಳಗುಂದಿ ಗ್ರಾಮದಿಂದ ಶಾಲಾ-ಕಾಲೇಜುಗಳಿಗೆ ತೆರಳುವ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ಅವರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಾರಿಗೆ ವ್ಯವಸ್ಥಾಪಕರು ಕರೆ ಮೂಲಕ ಹೆಚ್ಚುವರಿ ಬಸ್ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
ಪ್ರತಿಭಟನೆಯಲ್ಲಿ ಎಂ. ಪ್ರಕಾಶ್, ಎಚ್. ಕರಿಬಸಪ್ಪ, ಪ್ರಶಾಂತ್, ಪ್ರವೀಣ್, ಕೆ.ಕೆ. ರಾಜ್, ಎಂ.ಎಸ್. ವಿಜಯಲಕ್ಷ್ಮಿ, ಲತಾ, ಮಾನಸ, ಚಂದ್ರಮ್ಮ, ಜಯಶ್ರೀ ಹಾಗೂ ತೇಜು ಸೇರಿದಂತೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 