ಶಾಸಕ ಬಸವರಾಜ್ ಶಿವಣ್ಣನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Protest demanding that MLA Basavaraj Shivanna be given a ministerial position
ಬ್ಯಾಡಗಿ 02: ತಾಲೂಕಿನ ಪ್ರಥಮ ಪ್ರಜೆ ಶಾಸಕ ಬಸವರಾಜ್ ಶಿವಣ್ಣನವರ ಇವರಿಗೆ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕಿನ ಮತದಾರರು ಬೃಹತ್ ಪ್ರತಿಭಟನಾ ರ್ಯಾಲಿ ಮಾಡಿದರು ರ್ಯಾಲಿಯಲ್ಲಿ ಸಾವಿರಾರು ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು ಪ್ರತಿಭಟನಾ ರ್ಯಾಲಿಯೂ ಪಟ್ಟಣದ ಕಾಂಗ್ರೆಸ್ ಭವನದಿಂದ ಹೊರಟು ಹಳೆ ಪುರಸಭೆ ಎದುರು ಸಾವಿರಾರು ಕಾರ್ಯಕರ್ತರ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪ್ರತಿಭಟನೆ ನೆತೃತ್ವ ವಹಿಸಿದ್ದ ತಾಲೂಕು ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಸುತ್ತುಕೋಟಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ ಡಿಕೆ ಶಿವಕುಮಾರ್ ಸಂಪುಟದಲ್ಲಿ ನಮ್ಮ ಶಾಸಕರಾದ ಬಸವರಾಜ್ ಶಿವಣ್ಣನವರಿಗೆ ಸಚಿವ ಸ್ಥಾನ ನೀಡಬೇಕು.
ನಮ್ಮ ಶಾಸಕರು ನಾಲ್ಕು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ ಜಿಲ್ಲೆಯಲ್ಲಿ ಆರು ಶಾಸಕರ ಆಯ್ಕೆಯಾಗಲು ನಮ್ಮ ಶಾಸಕರ ಪಾತ್ರ ಹೆಚ್ಚು ಇದೆ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರು ಚಲೋ.ಪಕ್ಷದ ಮುಖಂಡ ನ್ಯಾಯವಾದಿ ಡಿಹೆಚ್ ಬುಡ್ಡನಗೌಡ್ರು ಮಾತನಾಡಿ ನಾಳೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಂಗಳೂರಿಗೆ ಹೋಗುತ್ತೇವೆ ಎಂದು ಹೇಳಿದರು.
ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮುಖಂಡ ಅಬ್ದುಲ್ ಮುನಫ್ ಎರೆಸಿಮಿ ಮಾತನಾಡಿ ನಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದೆ ಹೋದರೆ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ದೊಡ್ಡ ನಷ್ಟ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆತ್ಮಹತ್ಯೆಗೆ ಯತ್ನ.ಶಾಸಕ ಶಿವಣ್ಣನವರ ಅಭಿಮಾನಿ ಒಬ್ಬರು ಪ್ರತಿಭಟನೆ ವೇಳೆ ನಮ್ಮ ಶಾಸಕರಿಗೆ ಸಚಿವ ನೀಡಬೇಕು ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದನು. ಶಾಸಕ ಮಾನೆ ವಿರುದ್ಧ ಆಕ್ರೋಶ ಈ ವೇಳೆ ಅಭಿಮಾನಿ ಒಬ್ಬ ಮಾತನಾಡಿ ಹಾನಗಲ್ ಶಾಸಕ ಮನೆಯವರ ವಿರುದ್ಧ ಆಕ್ರೋಶ ಪರಾಗಿದನು ಶಿವಣ್ಣನವರು ಸಾಹೇಬರು ಅನಾರೋಗ್ಯದ ಸಮಸ್ಯೆ ಇದೆ ಮತ್ತು ವಯಸ್ಸು ಆಗಿದೆ ಎಂದು ಹೇಳಿದ್ದಾರೆ ಎಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಬಸವರಾಜ ಸವಣೂರ. ಮಾರುತಿ ಅಚ್ಚಿಗೇರಿ. ಚನ್ನಬಸಪ್ಪ ಹುಲ್ಲತ್ತಿ. ದುರ್ಗೇಶ್ ಗೋಣೆಮ್ಮನವರ್. ಮಜೀದ್ ಮುಲ್ಲಾ. ಬಸವರಾಜ್ ಕೋಣನವರ್. ರಮೇಶ್ ಕೋಟಿ ಯವರ.ರಫಿಕ ಬೆಳಗಾಂ ಹಾಗೂ ಸಾವಿರಾರು ಕಾರ್ಯಕರ್ತರು ಮುಖಂಡರು ಅಭಿಮಾನಿಗಳು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 