ಶಾಸಕ ಅಭಯ್ ಪಾಟೀಲ ರಾಜೀನಾಮೆಗೆ ಆಗ್ರಹಿಸಿ ಧರಣಿ
ಬೆಳಗಾವಿ 19: ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರ ವಿರುದ್ಧ ಕೇಳಿಬಂದಿರುವ ಆಸ್ತಿ, ಆದಾಯ, ಭೂಮಿ ಕಬಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅವರು ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರಹವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು. ಸಾಮಾಜಿಕ ಹೋರಾಟಗಾರರಾದ ರಾಜಕುಮಾರ ಟೊಪ್ಪಣ್ಣವರ ಹಾಗೂ ಸುಜೀತ್ ಮುಳಗುಂದ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವಾಗ ಎಲ್ಲರಿಗೂ ಒಂದೇ ಮಾನದಂಡ ಅನ್ವಯಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಶಾಸಕ ಅಭಯ್ ಪಾಟೀಲ ಅವರನ್ನು ಬಿಜೆಪಿ ಪಕ್ಷದಿಂದ ಹೊರಹಾಕಬೇಕು ಹಾಗೂ ಶೀಘ್ರದಲ್ಲೇ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಪಾದಯಾತ್ರೆ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಅನಿಲ್ ಉಪರಿ, ಯುವರಾಜ ತಳವಾರ ಸೇರಿದಂತೆ ಹಲವರು ಭಾಗವಹಿಸಿದ್ದರು.