ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ: ಡಿಸಿಗೆ ಮನವಿ
Protest in Belgaum against minimum wage hike: Appeal to DC
ಬೆಳಗಾವಿ 01 : ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿದವು.ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರೀಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮನೋಳಿ, ಈಗಾಗಲೇ ಉದ್ಯಮಗಳು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿವೆ. ಈಗ ಪುನಃ ಕನಿಷ್ಠ ವೇತನವನ್ನು ಹೆಚ್ಚಿಸಿದರೆ ಬಹಳಷ್ಟು ಉದ್ಯಮಗಳು ಬಾಗಿಲು ಮುಚ್ಚಲಿವೆ. ಇದರಿಂದ ನಿರುದ್ಯೋಗ ಸಮಸ್ಯೆಯೂ ಉಲ್ಬಣವಾಗಲಿದೆ. ಯಾವುದೇ ಕಾರಣಕ್ಕೆ ಈಗ ಆದೇಶಿಸಿರುವ ಕನಿಷ್ಠ ವೇತನ ನಿಯಮವನ್ನು ಜಾರಿಗೆ ತರಬಾರದು. ಹಂತ ಹಂತವಾಗಿ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮೆಲೆ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚ್ಜಿಸುವುದು ಉದ್ಯಮಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದರು.
ಪಕ್ಕದ ರಾಜ್ಯಗಳಲ್ಲಿ ಕನಿಷ್ಠ ವೇತನ ಅತ್ಯಂತ ಕಡಿಮೆ ಇದೆ. ಆದರೆ ಕರ್ನಾಟಕದಲ್ಲಿ ಮಾತ್ರ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಉದ್ಯಮಗಳ ಉಳಿವಿಗೆ ಯಾವುದೇ ಸಹಾಯ ಮಾಡದೆ ಈ ರೀತಿ ವೇತನ ಹೆಚ್ಚಿಸುವುದರಿಂದ ಇಡೀ ಉದ್ಯಮವಲಯಕ್ಕೆ ಆಘಾತವಾಗಿದೆ ಎಂದು ತಿಳಿಸಿದರು.ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಉದ್ಯಮಿಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿಯೂ, ಶೀಘ್ರವೇ ನೂತನವಾಗಿ ನೇಮಕವಾಗಲಿರುವ ಕಾರ್ಮಿಕ ಸಚಿವರು ಹಾಗೂ ಕೈಗಾರಿಕಾ ಸಚಿವರ ಜೊತೆ ಸಭೆಯನ್ನು ಆಯೋಜಿಸಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಸತೀಶ್ ಕುಲಕರ್ಣಿ, ವಾಣಿಜ್ಯೋದ್ಯಮ ಸಂಘದ ಎಲ್ಲಾ ಪದಾಧಿಕಾರಿಗಳು, ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳು, ನಗರದ ವಿವಿಧ ಉದ್ಯಮಗಳ ನೂರಾರು ಪ್ರತಿನಿಧಿಗಳು ಸೇರಿದಂತೆ ಬೇರೆ ಬೇರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.:
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 