ಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಚಿಕ್ಕೋಡಿಯಲ್ಲಿ ಪ್ರತಿಭಟನೆ

ಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಚಿಕ್ಕೋಡಿಯಲ್ಲಿ ಪ್ರತಿಭಟನೆ Protest in Chikkodi condemning the ED raid on Satish Jarkiholi

ಚಿಕ್ಕೋಡಿ 10 : ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ನಡೆಸಿರುವುದನ್ನು ಖಂಡಿಸಿ ಸತೀಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಚಿಕ್ಕೋಡಿ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜಕೀಯ ಉದ್ದೇಶದಿಂದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.ಮುಖಂಡ ಅರ್ಜುನ ನಾಯಿಕವಾಡಿ ಹಾಗೂ ನ್ಯಾಯವಾದಿ ಎಚ್‌.ಎಸ್‌. ನಸಲಾಪೂರೆ ಮಾತನಾಡಿ, ಸತೀಶ ಜಾರಕಿಹೊಳಿ ಅವರ ಜನಪ್ರಿಯತೆ ಹಾಗೂ ರಾಜಕೀಯ ಬೆಳವಣಿಗೆಯನ್ನು ಸಹಿಸಲಾಗದೆ ಅವರ ಮೇಲೆ ಇಡಿ ದಾಳಿ ನಡೆಸಲಾಗಿದೆ. ಯುವ ಮುಖಂಡರಾದ ರಾಜು ಕೊಟಗಿ.ಶಿವಾನಂದ ಮರ್ಯಾಯಿ, ಪಿ.ಐ. ಕೋರೆ, ಸಂಜು ಕಾಂಬಳೆ, ರಾಮಕೃಷ್ಣ ಪಾನಬುಡೆ, ಭೀಮ ಕಾಂಬಳೆ, ಶೀತಲ ಮುಂಡೆ, ರುದ್ರ​‍್ಪ ಸಂಗಪ್ಪಗೋಳ, ಜೀವನ ಮಾಂಜ್ರೇಕರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.