ಧಾರವಾಡ - ಹುಬ್ಬಳ್ಳಿ

ಮುಮ್ಮಿಗಟ್ಟಿ ಗ್ರಾಮದಲ್ಲಿ ನರೇಗಾ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ: ಆಗಸ್ಟ್‌ 1ರಿಂದ ಕೆಲಸ ನೀಡುವ ಭರವಸೆ

ಮುಮ್ಮಿಗಟ್ಟಿ ಗ್ರಾಮದಲ್ಲಿ ನರೇಗಾ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ: ಆಗಸ್ಟ್‌ 1ರಿಂದ ಕೆಲಸ ನೀಡುವ ಭರವಸೆ
Protest in Mummigatti village demanding NREGA work; assurance given that work will be provided start

ಧಾರವಾಡ 28: ಮುಮ್ಮಿಗಟ್ಟಿ ಗ್ರಾಮದ ನರೇಗಾ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ, ಮುಮ್ಮಿಗಟ್ಟಿ ಗ್ರಾಮದ ನರೇಗಾ ಕಾರ್ಮಿಕರಿಗೆ ಆಗಸ್ಟ್‌ 1ರಿಂದ ಕೆಲಸ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  

ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಎಡಿ ಹಾಗೂ ಇಂಜಿನಿಯರ್ರನ್ನು ಸ್ಥಳಕ್ಕೆ ಕರೆಸಿ ಕಾರ್ಮಿಕರ ಸಮಸ್ಯೆ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳ ಭರವಸೆಯ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.  

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋಣವಾರ, ಸದಸ್ಯರಾದ ಹನುಮವ್ವ, ಬಸವರಾಜಪ್ಪ, ಸಾವಕ್ಕ, ಸರಸ್ವತಮ್ಮ, ಲಕ್ಷ್ಮೀ, ಗಿರಿ ಜವ್ವ ಹಾಗೂ ನಿಂಗಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.  


ಸುದ್ದಿ ಓದಿ