ವಿಜಯನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಲೋಕದರ್ಶನ ವರದಿ
ಹೊಸಪೇಟೆ, ಸೆ. 24: ವಿಜಯನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹಿಂಸೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (ಡಿ.ಎಚ್.ಎಸ್.) ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ತನಿಖೆಯನ್ನು ಸಿಐಡಿ ಮೂಲಕ ನಡೆಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಮತ್ತು ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘಟನೆಯ ಮುಖಂಡರು ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಪ್ರಕರಣಗಳು ಮುಂದುವರಿಯುತ್ತಿದ್ದು, ಸರ್ಕಾರವು ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ದಲಿತ ಸಮುದಾಯದ ಹಲವು ವರ್ಷಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.