ಪಿಂಚಣಿ ಸ್ಥಗಿತ ವಿರೋಧಿಸಿ ಸೆ. 2ರಂದು ಪ್ರತಿಭಟನೆ
Protest on September 2 against the suspension of pensions
ಕೊಪ್ಪಳ 20 : ಅರ್ಹ ಫಲಾನುಭವಿಗಳಿಗೆ ಸ್ಥಗಿತಗೊಳಿಸಿರುವ ಮಾಸಿಕ ಪಿಂಚಣಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಮರುಪರೀಶೀಲನೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಸಮಿತಿ ಸೆಪ್ಟೆಂಬರ್ 2ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.
ಗುರುವಾರ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಯುಸಿಐ(ಸಿ) ರಾಜ್ಯ ಸಮಿತಿ ಸದಸ್ಯ ರಾಮಚಂದ್ರ್ಪ ಆಲ್ದಾಳ್ಳಿ ಮಾತನಾಡಿ, ವೃದ್ಧರು, ವಿಧವೆಯರು, ವಿಕಲಚೇತನರು, ಅವಿವಾಹಿತ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ನೀಡಲಾಗುತ್ತಿದ್ದ ಪಿಂಚಣಿಯನ್ನು ಕಳೆದ ಐದು ತಿಂಗಳಿಂದ ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದರು.
ಅರ್ಹ ಫಲಾನುಭವಿಗಳನ್ನು ಪತ್ತೆಹಚ್ಚುವ ಹಾಗೂ ದಾಖಲೆಗಳ ಮರುಪರೀಶೀಲನೆ ಹೆಸರಿನಲ್ಲಿ ಅರ್ಹ ಬಡ ಫಲಾನುಭವಿಗಳನ್ನೂ ಪಿಂಚಣಿಯಿಂದ ವಂಚಿಸಲಾಗುತ್ತಿದೆ. ಆದಾಯ ಮಿತಿಯನ್ನು 32,000ಕ್ಕೆ ನಿಗದಿಪಡಿಸಿರುವುದು ಅವಾಸ್ತವಿಕವಾಗಿದ್ದು, ನರೇಗಾದಲ್ಲಿ 100 ದಿನ ಕೆಲಸ ಮಾಡುವ ಕಾರ್ಮಿಕನ ವಾರ್ಷಿಕ ಆದಾಯವೇ ಸುಮಾರು 36,900 ಆಗುತ್ತದೆ ಎಂದು ಅವರು ಹೇಳಿದರು.
32,000 ಆದಾಯ ಮಿತಿಯನ್ನು ರದ್ದುಪಡಿಸಿ, ಹಿಂದಿನಂತೆ ಬಿಪಿಎಲ್ ಪಡಿತರ ಚೀಟಿಯನ್ನು ಅರ್ಹತೆಯ ಮಾನದಂಡವಾಗಿ ಪರಿಗಣಿಸಬೇಕು. ಫಲಾನುಭವಿಗಳ ಮನೆಬಾಗಿಲಿಗೆ ತೆರಳಿ ದಾಖಲೆಗಳನ್ನು ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಾರ್ವಜನಿಕರು ಹಾಗೂ ಸಂಕಷ್ಟಕ್ಕೊಳಗಾದ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎಸ್ಯುಸಿಐ(ಸಿ) ರಾಜ್ಯ ಸಮಿತಿ ಸದಸ್ಯ ರಾಮಲಿಂಗಪ್ಪ ಆಲ್ದಾಳ್ಳಿ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಖಂಡ ಶರಣು ಗಡ್ಡಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 