ಬಳ್ಳಾರಿ

ಮೊಬೈಲ್ ದರಗಳ ಏರಿಕೆ ವಿರೋಧಿಸಿ ಪ್ರತಿಭಟನೆ

ಮೊಬೈಲ್ ದರಗಳ ಏರಿಕೆ ವಿರೋಧಿಸಿ ಪ್ರತಿಭಟನೆ

ಲೋಕದರ್ಶನ ವರದಿ 

ಬಳ್ಳಾರಿ 25: ಈ ಕೋವಿಡ್ -19 ಪರಿಸ್ಥಿತಿಯಲ್ಲಿ ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಈ ನಡುವೆ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ. ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ತಮ್ಮ ಜೀವನ ಮತ್ತು ಜೀವನೋಪಾಯಕ್ಕಾಗಿ ಮೊಬೈಲ್ ಬಳಕೆಯನ್ನು ಅಗಾಧವಾಗಿ ಅವಲಂಬಿಸಿದ್ದಾರೆ. ಆನ್‌ಲೈನ್ ತರಗತಿಗಳು, ಆನ್‌ಲೈನ್ ಅಪ್ಲಿಕೇಶನ್‌ಗಳು, ಆನ್‌ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಎಲ್ಲವುಗಳಿಂದ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟಿ ್ಟದೆ. ಈ ಪರಿಸ್ಥಿತಿಯಲ್ಲಿ, ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾದಂತಹ ಎಲಾ ್ಲ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತು ್ತ ರೀಚಾರ್ಜ್‌ ನದರಗಳನ್ನು ಶೇಕಡಾ 20 ರಿಂದ 25ಅ ವರೆಗೆ ಹೆಚಿ ್ಚಸಿವೆ, ಇದು ಸಂಪೂರ್ಣವಾಗಿ ಜನವಿರೋಧಿಯಾಗಿದೆ.  


ಈ ಸಂದರ್ಭದಲ್ಲಿ ಸೇವಾ ಪೂರೈಕೆದಾರರು ಮತು ್ತ ಗ್ರಾಹಕರ ನಡುವೆ ತೀರ​‍್ುಗಾರರ ಪಾತ್ರವನ್ನು ವಹಿಸಬೇಕಾದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ನಮಗೆ ಆಘಾತವಾಗಿದೆ. ಸಾರ್ವಜನಿಕ ಉದ್ಯಮವಾಗಿದ್ದ ಃಖಓಐ ದುರ್ಬಲಗೊಂಡ ನಂತರ, ಖಾಸಗಿ ಮೊಬೈಲ್ ಆಪರೇಟರ್ ಕಂಪನಿಗಳು ದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವಾ ಮಾರುಕಟ್ಟೆಯ ಗಣನೀಯ ಭಾಗದ ಮೇಲೆ ತಮ್ಮ ಬಿಗಿಹಿಡಿತ ಸಾಧಿಸಿವೆ. ಆದ್ದರಿಂದ ಈ ಖಾಸಗಿ ಮೊಬೈಲ್ ಕಂಪನಿಗಳು ಭಾರೀ ಲಾಭ ಗಳಿಸಲು ತಮ್ಮ ಮೂಗಿನ ನೇರಕ್ಕೆ ದರಗಳನ್ನು ನಿಗದಿಮಾಡಿ, ಮೊಬೈಲ್ ಬಳಕೆದಾರರು ಅನಿವಾರ್ಯವಾಗಿ ಅಧಿಕ ಹಣ ಪಾವತಿಸುವಂತೆ ಮಾಡಿವೆ. ಖಾಸಗಿ ಮೊಬೈಲ್ ಕಂಪನಿಗಳ ಈ ಕ್ರಮವನ್ನು ನಾವು ವಿರೋಧಿಸುತ್ತೇವೆ. ಹಾಗೂ ಸಾಮಾನ್ಯ ಜನರ ಪರವಾಗಿ ಈ ಕೆಳಗಿನ ಬೇಡಿಕೆಗಳಿಗಾಗಿ ಆಗ್ರಹಿಸಿ ಇ-ಟಚಿಟ ಮೂಲಕ ಮನವಿಪತ್ರ ಸಲ್ಲಿಸಲಾಯಿತು. 


ಈ ನಿಯೋಗದಲ್ಲಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಪಂಪಾಪತಿ.ಎ, ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಮತ್ತು ವಿಜಯನಗರ ಜಿಲ್ಲಾ ಕಾರ‌್ಯದರ್ಶಿಗಳಾದ ಎನ್‌.ಎಲ್‌.ಪಂಪಾಪತಿ ಹಾಗೂ ಸೇತು ಮಾಧವ ಇದ್ದರು. 


ಸುದ್ದಿ ಓದಿ