ವಿದ್ಯಾರ್ಥಿಗಳ ಬಸ್ ಪಾಸ್ ಕೋಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 22: ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಕೋಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಹೊಸ ಬಸ್ ನಿಲ್ದಾಣ ಮುಂದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲಾಯಿತು.
ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ಗುರಳ್ಳಿ ರಾಜ ಅವರು ಮಾತನಾಡುತ್ತಾ ಪ್ರಸ್ತುತ ಪದವಿ ವಿದ್ಯಾರ್ಥಿಗಳ ಪ್ರವೇಶಾತಿ ಮುಗಿದು ಕಾಲೇಜು ಪ್ರಾರಂಭಗೊಂಡು ತಿಂಗಳಾಗುತ್ತಿದ್ದರು, ವಿದ್ಯಾರ್ಥಿಗಳಿಗೆ ಇನ್ನು ಬಸ್ ಪಾಸ್ ದೊರೆತ್ತಿಲ್ಲ. ಬಹುತೇಕ ಸಾವಿರಾರು ವಿದ್ಯಾರ್ಥಿಗಳು ಹಳ್ಳಿಗಳಿಂದ ನಗರಕ್ಕೆ ವಿದ್ಯಾಭ್ಯಾಸಕ್ಕೆ ಬರುತ್ತಿದ್ದಾರೆ, ವಿದ್ಯಾರ್ಥಿಗಳು ಬಸ್ ಪಾಸ್ಗಾಗಿ ಪ್ರತಿನಿತ್ಯ ಅಲೆದಾಡುವಂತಾಗಿದೆ ಮತ್ತು ದಿನನಿತ್ಯ ನೂರಾರು ರೂಪಾಯಿ ಖರ್ಚುಮಾಡಿ ಬರುತ್ತಿದ್ದಾರೆ. ಇಷ್ಟೆಲ್ಲಾ ಕಷ್ಟಪಟ್ಟು ಬಂದರೂ ಕೂಡಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆಯದೆ ಇರುವುದು ದುರಂತ. ಹಾಗಾಗಿ ವಿದ್ಯಾರ್ಥಿಗಳ ಶಿಕ್ಷಣದ ಹಿತಾದೃಷ್ಟಿಯಿಂದ ಈ ಕೋಡಲೇ ವಿದ್ಯಾರ್ಥಗಳಿಗೆ ಬಸ್ ಪಾಸ್ ವಿತರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ರವಿಕಿರಣ್.ಜೆ.ಪಿ. ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.