10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಜಮಖಂಡಿ 04 : ನಗರದ ಬಸವ ಭವನದಲ್ಲಿ ಭಾನುವಾರ ನಡೆದ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ, ಜಿಲ್ಲಾ ಹಾಗೂ ಜಮಖಂಡಿ ತಾಲೂಕು ಘಟಕಗಳ ಸಹಯೋಗದಲ್ಲಿ ನಡೆದ ಸಮ್ಮೇಳನದ ಕಾರ್ಯಕ್ರಮದ ವೇಳೆ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾಕಾರರು ಕಪ್ಪು ಬಟ್ಟೆಯ ಬಾವುಟವನ್ನು ಹಾರಿಸಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಬಾವುಟವನ್ನು ವಶಕ್ಕೆ ಪಡೆದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಯಿತು. 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಈ ಪ್ರತಿಭಟನೆ ಕಾರ್ಯಕ್ರಮದ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಯಿತು. ಸಮ್ಮೇಳನದ ವೇದಿಕೆಯಲ್ಲಿಯೇ ಕಪ್ಪು ಬಾವುಟ ಪ್ರದರ್ಶನವಾಗಿರುವುದು ಸಾಹಿತ್ಯ ವಲಯದಲ್ಲಿ ಗಮನ ಸೆಳೆಯಿತು.
ಜಮಖಂಡಿ ನಗರದ ಬಸವ ಭವನದಲ್ಲಿ ಭಾನುವಾರ ನಡೆದ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.