ಸಕಾಲದಲ್ಲಿ ಕಂದಾಯ ಸೇವೆ ಒದಗಿಸಿ, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ: ಉಪ ಲೋಕಾಯುಕ್ತ ಬಿ. ವೀರಪ್ಪ
ಬೆಳಗಾವಿ, ಅ.31: ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಶನಿವಾರ ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಚೇರಿಯ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಹಾನಿಯ ಪ್ರಮಾಣದ ಆಧಾರದ ಮೇಲೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಿರುವ ಕುರಿತು ಸಮಗ್ರ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆಯ ಎಲ್ಲ ಸೇವೆಗಳನ್ನು ಸಾರ್ವಜನಿಕರಿಗೆ ಸಕಾಲದಲ್ಲಿ ತಲುಪಿಸಬೇಕು. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.