ಚರಂಡಿ ಸ್ವಚ್ಛತೆಗೆ ಶಾಶ್ವತ ಪರಿಹಾರ ಒದಗಿಸಿ:- ಮೈಲಾರ್ಪ, ಡಿ ಎಚ್ ಆಗ್ರಹ
ಲಕ್ಷ್ಮೇಶ್ವರ" ತಾಲೂಕಿನ ಸಂಕದಾಳ ಗ್ರಾಮದಲ್ಲಿ ಚರಂಡಿ (ಗಟಾರು) ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ದುರಸ್ತಿ ಮಾಡಬೇಕಾದ ಸಂಬಂಧಪಟ್ಟ ಅಧಿಕಾರಿಗಳ ಘೋರ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಪರಿಶಿಷ್ಟ ಜಾತಿಯ ಕಾಲೋನಿಯ ಹಾಗೂ ಗ್ರಾಮದ ಪ್ರಮುಖ ಚರಂಡಿ ಹಾಗೂ ಗಟಾರುನಲ್ಲಿ ಕೊಳಚೆ ನೀರು ಮತ್ತು ಗಟಾರಿನಲ್ಲಿ ಸಂಪೂರ್ಣ ಮಣ್ಣು ತುಂಬಿಕೊಂಡರು.
ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣಮೂರ್ತಿ ಕಡೂರು ಅವರಿಗೆ ಹಲವಾರು ಭಾರಿ ಗಮನಕ್ಕೆ ತಂದರೂ ಅಧಿಕಾರಿಗಳು ಮಾತ್ರ ಕಣ್ಣು ಕಾಣದಂತೆ ಕಣ್ಣು ಮುಚ್ಚಿ ಕುಳಿತಿದೆ. ಸುಮಾರು ಭಾರಿ ಗ್ರಾಮಸ್ಥರು ವಿನಂತಿಸಿದಾಗ ಸರ್ಕಾರದಲ್ಲಿ ಅನುದಾನದ ಕೊರತೆ ಇದೆ ಹಾಗಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲು ನನ್ನಿಂದ ಆಗುವುದಿಲ್ಲ ಬೇಕಾದರೆ ಮೇಲಧಿಕಾರಿಗಳ ಬಳಿ ಹೋಗಿ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಉದಾಪೆಯ ಉತ್ತರ ಕೊಡುತ್ತಿದ್ದಾರೆ.
ಗ್ರಾಮದಲ್ಲಿ ಗಟಾರು ಮತ್ತು ಚರಂಡಿ ಸ್ವಚ್ಛ ಮಾಡಿಸದೆ ಇರುವುದರಿಂದ ಸೊಳ್ಳೆಗಳ ಕಾಟ, ಸಾಂಕ್ರಾಮಿಕ ರೋಗದ ಭೀತಿ ಕಳೆದ ಹಲವು ತಿಂಗಳುಗಳಿಂದ ಚರಂಡಿ ನೀರು ಸರಾಗವಾಗಿ ಹರಿಯದೇ ಬ್ಲಾಕ್ ಆಗಿದೆ. ಇದರಿಂದಾಗಿ ಗ್ರಾಮದ ತುಂಬೆಲ್ಲಾ ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಅತಿಯಾಗಿದೆ. ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಶಾಲಾ ಮಕ್ಕಳು ಇದೇ ಕೊಳಚೆ ನೀರಿನಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಗ್ರಾಮದಲ್ಲಿ ಈಗಾಗಲೇ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಗ್ರಾಮಸ್ಥರು ಆರೋಗ್ಯದ ಹಿತದೃಷ್ಟಿಯಿಂದ ಆತಂಕಗೊಂಡಿದ್ದಾರೆ. ಇದರಿಂದ ಬೇಸತ್ತ ಗ್ರಾಮಸ್ಥರೇ ಚರಂಡಿಗಳನ್ನು ತಾವೇ ಸ್ವಚ್ಛ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಗ್ರಾಮಸ್ಥರ ಕಾರ್ಯಕ್ಕೆ ಅಧಿಕಾರಿಗಳ ಬೇಜಾವ್ದಾರಿಯೇ ಕಾರಣ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣಮೂರ್ತಿ ಕಡೂರು ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಈ ನಡೆಗೆ ಸಾರ್ವಜನಿಕರು ಆಕ್ರೋಶ ಎಸಗುತ್ತಿದ್ದಾರೆ."ಗಟಾರು ದುರಸ್ತಿ ಮಾಡುವಂತೆ ಗ್ರಾಪಂ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಅಧಿಕಾರಿಗಳು ಕೇವಲ ಭರವಸೆ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ ವಿನಃ ಇತ್ತ ತಿರುಗಿಯೂ ನೋಡುತ್ತಿಲ್ಲ," ಎಂದು ಗ್ರಾಮದ ಮುಖಂಡರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನು ಕೆಲವೇ ದಿನಗಳಲ್ಲಿ ಈ ಹದಗೆಟ್ಟ ಗಟಾರುಗಳನ್ನು ಸ್ವಚ್ಛಗೊಳಿಸಿ, ಸೂಕ್ತ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗ್ರಾಮಸ್ಥರೆಲ್ಲರೂ ಸೇರಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಉನ್ನತ ಅಧಿಕಾರಿಗಳು ತಕ್ಷಣವೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಸಂಕದಾಳ ಗ್ರಾಮದ ಗಟಾರು ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಬೇಕಾಗಿದೆ ಎಂದು ಗ್ರಾಮದ ವಕೀಲರಾದ ಮೈಲಾರ್ಪ ಡಿ ಎಚ್ ಅವರು ಆಗ್ರಹಿಸಿದ್ದಾರೆ.