ಸರಿಯಾದ ಮಾಹಿತಿ ನೀಡಿ: ಮಣ್ಣುಣ್ಣವರ ಮನವಿ

ಸರಿಯಾದ ಮಾಹಿತಿ ನೀಡಿ: ಮಣ್ಣುಣ್ಣವರ ಮನವಿ  Provide accurate information: Plea by 'Mannunnavaru'

ಶಿಗ್ಗಾವಿ, ಜು.08: ಎಸ್‌ಐಆರ್  ಫಾರ್ಮ್‌ ಭರ್ತಿ ಮಾಡುವ ವೇಳೆ ಸರ್ಕಾರದ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿ ನೀಡುವುದು ಪ್ರತಿಯೊಬ್ಬ ಮತದಾರರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ವಿ. ಮಣ್ಣುಣ್ಣವರ ಹೇಳಿದರು.  

ಪಟ್ಟಣದ ಸವಣೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಲ್‌ಒಗಳು ಮನೆಗಳಿಗೆ ಬಂದಾಗ ಅಗತ್ಯ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು ಎಂದು ಮನವಿ ಮಾಡಿದರು.  

ಇತ್ತೀಚಿನ ದಿನಗಳಲ್ಲಿ ಬಿಎಲ್‌ಒಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಕೆಲವು ವಲಯಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ರೀತಿಯ ವದಂತಿಗಳಿಗೆ ಕಿವಿಗೊಡದೆ, ಚುನಾವಣಾ ಆಯೋಗ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸ ಇರಿಸಿಕೊಳ್ಳಬೇಕು ಎಂದು ಅವರು ಹೇಳಿದರು.  

ಮತದಾರರು ಯಾವುದೇ ಗೊಂದಲಗಳಿಗೆ ಒಳಗಾಗದೆ, ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸಿ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಮತದಾರರ ಪಟ್ಟಿಯನ್ನು ಸಮರ​‍್ಕವಾಗಿ ಸಿದ್ಧಪಡಿಸಲು ನೆರವಾಗಬೇಕು ಎಂದು ಮಣ್ಣುಣ್ಣವರ ಮನವಿ ಮಾಡಿದರು.