ಸರಿಯಾದ ಮಾಹಿತಿ ನೀಡಿ: ಮಣ್ಣುಣ್ಣವರ ಮನವಿ
Provide accurate information: Plea by 'Mannunnavaru'
ಶಿಗ್ಗಾವಿ, ಜು.08: ಎಸ್ಐಆರ್ ಫಾರ್ಮ್ ಭರ್ತಿ ಮಾಡುವ ವೇಳೆ ಸರ್ಕಾರದ ಪ್ರತಿನಿಧಿಗಳಿಗೆ ಸರಿಯಾದ ಮಾಹಿತಿ ನೀಡುವುದು ಪ್ರತಿಯೊಬ್ಬ ಮತದಾರರ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ವಿ. ಮಣ್ಣುಣ್ಣವರ ಹೇಳಿದರು.
ಪಟ್ಟಣದ ಸವಣೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಲ್ಒಗಳು ಮನೆಗಳಿಗೆ ಬಂದಾಗ ಅಗತ್ಯ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು ಎಂದು ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಬಿಎಲ್ಒಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಕೆಲವು ವಲಯಗಳಿಂದ ಅಪಪ್ರಚಾರ ನಡೆಯುತ್ತಿದೆ. ಈ ರೀತಿಯ ವದಂತಿಗಳಿಗೆ ಕಿವಿಗೊಡದೆ, ಚುನಾವಣಾ ಆಯೋಗ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸ ಇರಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮತದಾರರು ಯಾವುದೇ ಗೊಂದಲಗಳಿಗೆ ಒಳಗಾಗದೆ, ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸಿ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಮತದಾರರ ಪಟ್ಟಿಯನ್ನು ಸಮರ್ಕವಾಗಿ ಸಿದ್ಧಪಡಿಸಲು ನೆರವಾಗಬೇಕು ಎಂದು ಮಣ್ಣುಣ್ಣವರ ಮನವಿ ಮಾಡಿದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 