ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಿ
ಹಾವೇರಿ 28 : ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆಗಳ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಬೇಕು, ಗ್ರಾಮಾಂತರ ಪ್ರದೇಶದಲ್ಲಿ ಸಕರ್ಾರಿ ಬಸ್ ಸೇವೆಗಳ ಸೌಕರ್ಯ ಹೆಚ್ಚಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ ಅವರು ಸೂಚಿಸಿದರು.
ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ರಸ್ತೆಗಳ ಡಾಂಬರೀಕರಣ ಹಾಕಿದ ಕೆಲ ಸಮಯದಲ್ಲಿ ಕಿತ್ತುಹೋಗುತ್ತಿರುವುದು ತಾಲೂಕಿನ ಹಲವೆಡೆ ಕಂಡುಬಂದಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್ ಇಂಜನೀಯರ್ಗಳು ಕಾಮಗಾರಿಗಳ ಸ್ಥಳದಲ್ಲಿ ಇದ್ದು ಮೇಲುಸ್ತುವಾರಿ ಮಾಡಬೇಕು ಹಾಗೂ ಮಂದಗತಿಯಲ್ಲಿ ನಡೆಯುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಅಪೂರ್ಣ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು ಇಂಜನೀಯರಗಳಿಗೆ ಸೂಚಿಸಿದರು.
ಬೆಳೆವಿಮೆ ಸೇರಿದಂತೆ ರೈತರಿಗಾಗಿ ರೂಪಿಸಲಾದ ಸಕರ್ಾರದ ವಿವಿಧ ಯೋಜನೆಗಳನ್ನು ಸಕಾಲದಲ್ಲಿ ರೈತರಿಗೆ ರಲುಪಿಸಬೇಕು. ರೈತರಿಗೆ ಯೋಜನೆಗಳು ತಲುಪಿಸದರೆ ಅನಾವಶ್ಯಕ ಪ್ರತಿಭಟನೆಗಳು ನಿಲ್ಲುತ್ತವೆ. ಕೃಷಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿವಹಣೆಯಿಂದ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಳವಿಗಿ, ಯಲಗಚ್ಚ, ಕಡಕೋಳ ಗ್ರಾಮಗಳಲ್ಲಿ ನಿಮರ್ಾಣವಾಗುವ ಪಶು ಆರೋಗ್ಯ ಕೇಂದ್ರಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ನಿಮರ್ಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಹೊಸರಿತ್ತಿಯಲ್ಲಿರುವ ನೂತನ ಆಸ್ಪತ್ರೆ ಆವರಣದ ಹಳೇ ಕಟ್ಟಡವನ್ನು ತೆರವುಗೊಳಿಸಿ, ಗೇಟ್ ನಿಮರ್ಿಸಿದರೆ ಆಸ್ಪತ್ರೆ ಸುವ್ಯವಸ್ಥಿತವಾಗಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ಧರಾಜು ಕಲಕೋಟೆ ಅವರು ಸೂಚಿಸಿದರು. ಹಾವೇರಿ ಜಿಲ್ಲಾ ಕೆ.ಎಸ್.ಆರ್.ಟಿ.ಸಿ ಘಟಕದ ಕಾರ್ಯವೈಖರಿ ಬಗೆಗೆ ಸಾಕಷ್ಟು ದೂರುಗಳಿವೆ. ಹಲವಾರು ಗ್ರಾಮಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿಲ್ಲ. ಶಾಲಾ-ಕಾಲೇಜು ಮಕ್ಕಳು ಹಾಗೂ ಜನಸಾಮಾನ್ಯರಿಗೆ ತೊಂದರೆಯುಂಟಾಗುತ್ತದೆ. ಮೇಲ್ಮುರಿ, ಕಿತ್ತೂರು ಸೇರಿದಂತೆ ಮುಂಜಾನೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೆಲ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ಬಸ್ಸುಗಳನ್ನು ನಿಲ್ಲಿಸದೇ ಇರುವುದರಿಂದ ವಿದ್ಯಾಥರ್ಿಗಳು, ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ತ್ವರಿತವಾಗಿ ಸಮರ್ಪಕ ಬಸ್ ಸೌಕರ್ಯ ಕಲ್ಪಿಸಲು ರಸ್ತೆ ಸಾರಿಗೆ ಅದಿಕಾರಿಗಳಿಗೆ ಬ್ಯಾಡಗಿ ಕ್ಷೇತ್ರದ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಸೂಚಿಸಿದರು.
ದೇವಗಿರಿಯಿಂದ ಬ್ಯಾಡಗಿ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ಹಾಗೂ ಹಾವೇರಿಯಿಂದ ಬಡಮಲ್ಲಿ, ತಿಳವಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗಳ ಸಂಚಾರವನ್ನು ಲಾಭದಾಯಕವಲ್ಲ ಎಂದು ಸ್ಥಗಿತಗೊಳಿಸಲಾಗಿದೆ.
ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸ್ಥಗಿತಗೊಳಿಸಲಾಗಿರುವ ಬಸ್ ಸಂಚಾರ ಪುನರ್ ಆರಂಭಿಸುವಂತೆ ಸೂಚಿಸಿದರು.
ನಾಗನೂರಿನಿಂದ ಬೆಂಚಿಹಳ್ಳಿ ಗ್ರಾಮಗಳಿಗೆ ಹೋಗುವ ರಸ್ತೆಗಳು ಕಿರಿದಾಗಿರುವದರಿಂದ ಸಾರ್ವಜನಿಕರಿಗೆ ಪ್ರಯಾಣಕ್ಕೆ ಸಾಕಷ್ಟು ತೊಂದರೆ ಉಂಟಾಗಿದೆ. ಕೂಡಲೇ ರಸ್ತೆ ಅಗಲಿಕರಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ವಿರುಪಾಕ್ಷಪ್ಪ ಅವರು ಸೂಚಿಸಿದರು.ನೆರೆಹಾವಳಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳನ್ನು ತ್ವರಿತವಾಗಿ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕೆ.ಆರ್.ಡಿ.ಎಲ್, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಕ್ಷರ ದಾಸೋಹ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಮಾಹಿತಿ ಪಡೆದರು.ಸಭೆಯಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷರಾದ ಕಮಲವ್ವ ಪಾಟೀಲ, ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಬಸವರಾಜ, ಜಿ.ಪಂ ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 