ಶಕ್ತಿಧಾಮದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಅವಕಾಶ ಕೊಡಿ: ವಿಶಾಲ್
ಬೆಂಗಳೂರು, ನ. 16: ಅಪ್ಪು ಹೃದಯಾಘಾತದಿಂದ ಅಗಲಿದ್ದಾರೆ ಎಂಬ ಸುದ್ದಿಯನ್ನು ಅಂದು ನಂಬಲು ಸಾಧ್ಯವಾಗಲೇ ಇಲ್ಲ. ಅವರ ನಗೆಮೊಗ ಈಗಲೂ ಕಣ್ಣೆದುರೇ ಇದೆ ಎಂದು ತೆಲುಗು ನಟ ವಿಶಾಲ್ ಹೇಳಿದ್ದಾರೆ.
ಪುನೀತ ನಮನ ಕಾರ್ಯಕ್ರಮದಲ್ಲಿ ಕನ್ನಡದಲ್ಲಿಯೇ ಮಾತು ಆರಂಭಿಸಿ, ನಮ್ಮಪ್ಪ ಕನ್ನಡಿಗ. ಸ್ವಲ್ಪ ಸ್ವಲ್ಪ ಕನ್ನಡ ಬರುತ್ತೆ ಎಂದ ವಿಶಾಲ್, ಅಪ್ಪು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಅವರು ಮಾಡಿದ ಕಾರ್ಯಗಳಲ್ಲಿ ಒಂದಿಷ್ಟು ಭಾಗಿಯಾಗಲು ಶಕ್ತಿಧಾಮದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ತಮಗೆ ಅವಕಾಶ ನೀಡುವಂತೆ ದೊಡ್ಮನೆ ಕುಟುಂಬಸ್ಥರಲ್ಲಿ ಮನವಿ ಮಾಡಿದರು.
ಸ್ವಂತ ಮನೆಗಾಗಿ ಇಟ್ಟಿರುವ ಹಣವನ್ನು ಶಕ್ತಿಧಾಮದ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಲು ಮುಂದಾಗಿರುವೆ. ಹಾಗೂ ಎಲ್ಲಾ ಸೇವಾ ಕೈಂಕರ್ಯ ಮುಂದುವರಿಸಲು ಸಿದ್ಧನಾಗಿರುವೆ ಎಂದು ಹೇಳಿದರು.