ಪೌರ ಕಾರ್ಮಿಕರಿಗೆ ಸಮರ್ಕ ರೀತಿಯಲ್ಲಿ ಸೌಲಭ್ಯಗಳನ್ನು ಒದಗಿಸಿ: ಜಿಲ್ಲಾಧಿಕಾರಿ
Provide facilities to civic workers in a proper manner: Deputy Commissioner
ಲೋಕದರ್ಶನ ವರದಿ
ಕಾರವಾರ 16 :- ಜಿಲ್ಲೆಯಲ್ಲಿನ ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೀಡಲಾಗುವ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗಬಾರದು ಮತ್ತು ಎಲ್ಲಾ ಸೌಲಭ್ಯಗಳು ನಿಗಧಿತ ಸಮಯದಲ್ಲಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗಧಿತ ದಿನಾಂಕದಂದು ವೇತನ ಪಾವತಿಯಾಗಬೇಕು, ಇ.ಎಸ್.ಐ ಮತ್ತು ಇ.ಪಿ.ಎಫ್ ನಿಗಧಿತವಾಗಿ ಕಡಿತವಾಗುತ್ತಿರುವ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪರೀಶೀಲಿಸಬೇಕು. ಕರ್ತವ್ಯ ಸಮಯದಲ್ಲಿ ಸುರಕ್ಷತಾ ಪರಿಕರಗಳನ್ನು ತಪ್ಪದೇ ಬಳಸುವ ಕುರಿತಂತೆ ಪೌರ ಕಾರ್ಮಿಕರಿಗೆ ನಿರ್ದೇಶನ ನೀಡಬೇಕು, ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕಪ್ ಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು.
ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಅವರಿಗೆ ಹಸ್ತಾಂತರಿಸುವಂತೆ ಮತ್ತು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಪೂರ್ಣಗೊಂಡಿರುವ ಮನೆಗಳನ್ನು ಹಸ್ತಾಂತರಿಸುವಂತೆ ಎಂದರು. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ ಹೋಲ್ ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸದೇ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಬಳಸುವಂತೆ ಕಟುನಿಟ್ಟಿನ ಸೂಚನೆ ನೀಡಿ, ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಸಕ್ಕಿಂಗ್ ಯಂತ್ರಗಳನ್ನು ಬಳಸುತ್ತಿರುವ ಕುರಿತಂತೆ ಪರೀಶೀಲಿಸುವಂತೆ ಸೂಚಿಸಿದರು.
ಇತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ನೀಡಿರುವ ಸೂಚನೆಗಳನ್ನು ತಪ್ಪದೇ ಪಾಲಿಸಿ, ಅವರ ಸೂಚನೆಯಂತೆ ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಿರುವ ಕುರಿತ ವರದಿ ನೀಡಬೇಕು ಎಂದರು. ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 