ಮಹಾನಗರ ಪಾಲಿಕೆಗೆ ಸೇರಿದ ಗ್ರಾಮಗಳಿಗೆ ಅನುದಾನ ಕಲ್ಪಿಸಿ ಅಭಿವೃದ್ಧಿಗೆ ಒತ್ತು ನೀಡಿ: ಡಾ.ಬೆಲ್ದಾಳೆ

ಮಹಾನಗರ ಪಾಲಿಕೆಗೆ ಸೇರಿದ ಗ್ರಾಮಗಳಿಗೆ ಅನುದಾನ ಕಲ್ಪಿಸಿ ಅಭಿವೃದ್ಧಿಗೆ ಒತ್ತು ನೀಡಿ: ಡಾ.ಬೆಲ್ದಾಳೆ
Provide grants to villages belonging to the Metropolitan Corporation and emphasize development: Dr.

ಮಹಾನಗರ ಪಾಲಿಕೆಗೆ ಸೇರಿದ ಗ್ರಾಮಗಳಿಗೆ ಅನುದಾನ ಕಲ್ಪಿಸಿ ಅಭಿವೃದ್ಧಿಗೆ ಒತ್ತು ನೀಡಿ: ಡಾ.ಬೆಲ್ದಾಳೆ

ಬೀದರ್ 15: ಗ್ರಾಮಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಅಗತ್ಯವಿರುವ ಭೌತಿಕ ಮತ್ತು ಇತರ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ಒದಗಿಸಬೇಕು  ಅಂದಾಗ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.  ಬೀದರ್ ದಕ್ಷಿಣ ಕ್ಷೇತ್ರದ ಕಮಲಪುರ, ಹಜ್ಜರಗಿ ಗ್ರಾಮಕ್ಕೆ ಶಾಸಕರು ಭೇಟಿ ನೀಡಿ ಸಮಸ್ಯೆಗಳನ್ನು ಪರೀಶೀಲನೆ ಮಾಡಿ ಅವರು ಜನರ ಅಹವಾಲು ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಒದಗಿಸುವದಾಗಿ ಭರವಸೆ ನೀಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು ನಮ್ಮ ಬೀದರ್ ದಕ್ಷಿಣ ಕ್ಷೇತ್ರದ ಅಮಲಾಪುರ, ಗೋರನಳ್ಳಿ, ಚೊಂಡಿ, ಚೌಳಿ, ಕೋಳಾರ(ಕೆ), ಹಜ್ಜರಗಿ, ಕಮಲಪುರ, ನಿಜಾಂಪುರ ಗ್ರಾಮಗಳು ಗ್ರಾಮಪಂಚಾಯಿತಿ ಇಂದ  ಮಹಾನಗರ ಪಾಲಿಕೆಗೆ ಹೋಸದಾಗಿ ಸೇರಿಸಿದ್ದಾರೆ ಆದರೆ ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿಗಾಗಿ ಹಣ ಬಿಡುಗಡೆ ಆಗದ ಹಿನ್ನೆಲೆಯಲ್ಲಿ  ಜನರು ಮೂಲ ಸೌಕರ್ಯಕ್ಕಾಗಿ  ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.  ಇಂದು ವಿವಿಧ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಹತ್ತು ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.  ಗ್ರಾಮೀಣ ಮೂಲಸೌಕರ್ಯವು ಗ್ರಾಮೀಣ ರಸ್ತೆಗಳು, ಕುಡಿಯುವ  ನೀರು ಮತ್ತು ಒಳಚರಂಡಿಗಾಗಿ ಕಾಲುವೆ ಕೆಲಸಗಳು, ಗ್ರಾಮೀಣ ವಸತಿ, ಗ್ರಾಮೀಣ ನೀರು ಸರಬರಾಜು, ಗ್ರಾಮೀಣ ವಿದ್ಯುದೀಕರಣ ಮತ್ತು ಗ್ರಾಮೀಣ ದೂರಸಂಪರ್ಕ ಸಂಪರ್ಕವನ್ನು ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದ ಶಾಸಕರು ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ  ಆಗ್ರಹಿಸಿಸಿದರು. ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಮಾತನಾಡಿ ಕೂಡಲೇ ಪರೀಶೀಲನೆ ನಡೆಸಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. 


ಸುದ್ದಿ ಓದಿ