ಯರಗಟ್ಟಿ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ: ದಂಡಿನ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ: ದಂಡಿನ

ಯರಗಟ್ಟಿ 23: ಪಟ್ಟಣದ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಏರಿ​‍್ಡಸಿದ್ದ ಯರಗಟ್ಟಿ-ಮುರಗೋಡ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪ್ರಧಾನ ಗುರುಗಳು ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. 

ಸಭೆ ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಮಾತನಾಡಿದ ಅವರು 2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. 

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025ರ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷದ ಚಟುವಟಿಕೆ ಶುರುವಾಗಲಿವೆ. 

ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯು 2024ರ ಮೇ 29ರಿಂದ ಅಕ್ಟೋಬರ್ 2ರವರೆಗೆ ಇರಲಿದೆ. ಎರಡನೇ ಅವಧಿಯು 2024ರ ಅಕ್ಟೋಬರ್ 21ರಿಂದ 2025ರ ಏಪ್ರಿಲ್ 10 ರವರೆಗೆ ಇರಲಿದೆ. 

ಇದರ ನಡುವೆ, ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏಪ್ರಿಲ್ 11 ರಿಂದ ಮೇ 28ರವರೆಗೆ ಬೇಸಿಗೆ ರಜೆ ನಿಗದಿ ಮಾಡಿದೆ. 244 ಶಾಲಾ ಕರ್ತವ್ಯದ ದಿನಗಳು ಇರಲಿದ್ದು, ಇದರಲ್ಲಿ ಪರೀಕ್ಷೆ ಮೌಲ್ಯಾಂಕನ ಕಾರ್ಯಕ್ಕೆ 26 ದಿನಗಳು, ಪಠ್ಯೇತರ ಚಟುವಟಿಕೆಗೆ 24 ದಿನಗಳು, ಮೌಲ್ಯಮಾಪನ, ಫಲಿತಾಂಶ ವಿಶ್ಲೇಷಣೆಗೆ 10 ದಿನ, ಶಾಲಾ ಸ್ಥಳೀಯ ರಜೆ 4 ದಿನ, ಬೋಧನಾ ಕಲಿಕೆಗೆ 180 ದಿನಗಳು ಎಂದು ವಿಂಗಡಿಸಲಾಗಿದೆ. 

ಈ ವಾರ್ಷಿಕ ಮಾರ್ಗಸೂಚಿಯಲ್ಲಿ ಮಾಸಿಕ ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆ, ಸಂಭ್ರಮ ಶನಿವಾರ ಸೇರಿ ಇತರ ಯೋಜನೆಗಳನ್ನು ನಿರ್ವಹಿಸುವಂತೆ ಶಾಲಾ ಪ್ರಧಾನ ಗುರುಗಳು ಹಾಗೂ ಸಿ.ಆರ್‌.ಪಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ. 

ಮೇ. 29 ಮತ್ತು 30 ಪೂರ್ವಸಿದ್ದತೆ ಹಾಗೂ ಮೇ. 31 ರಂದು ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್‌.ಡಿ.ಎಂ.ಸಿ, ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರೊಂದಿ ಮಕ್ಕಳನ್ನು ಅದ್ಧೂರಿ ಸ್ವಾಗತ ಮಾಡಿ ಎಂದು ಹೇಳಿದರು. 

ಕ್ಷೇತ್ರ ಸಮನ್ವಯಾಧಿಕಾರಿ ಬಿ. ಎಸ್‌. ಬ್ಯಾಳಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ, ಶಿಕ್ಷಕರಾದ ವಿ. ಬಿ. ಪಡಿ, ಬಿ. ಎಸ್‌. ಆಲದಕಟ್ಟಿ, ಬಿ. ಆಯ್ ಜಮಾದಾರ, ಎಮ್‌. ಎಫ್‌. ಸಿದ್ದನಗೌಡ್ರ, ಈಶ್ವರ ಕಲ್ಲಗೌಡ್ರ, ಬಿ.ಆರ್‌.ಪಿಗಳಾದ ವಿ. ಸಿ. ಹಿರೇಮಠ, ಬಿ. ಆಯ್‌. ಚಿನಗುಡಿ, ವೈ. ಬಿ. ಕಡಕೋಳ, ವಸಂತ ಬಡಿಗೇರಿ ಸೇರಿದಂತೆ ಯರಗಟ್ಟಿ-ಮುರಗೋಡ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪ್ರಧಾನ ಗುರುಗಳು ಇದ್ದರು. 

ಯರಗಟ್ಟಿ-ಸವದತ್ತಿ ತಾಲೂಕಿನಲ್ಲಿ ಮಕ್ಕಳಿಗೆ ಮೊದಲ ದಿನವೇ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಮತ್ತು ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಂತೆ ಶಾಲಾ ಪ್ರಧಾನ ಗುರುಗಳು ತಿಳಿಸಿದರು. 

ಮೋಹನ ದಂಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸವದತ್ತಿ 


ಸುದ್ದಿ ಓದಿ