ಬೆಳಗಾವಿ

ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಜಾಥಾ

ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಜಾಥಾ


ಸವದತ್ತಿ 08:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ಆಚರಿಸಲಾದ ಗಾಂಧೀ ಜಯಂತಿಯಂದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಜಾಥಾ ಹಾಗೂ ಬೃಹತ್ ಸಮಾವೇಶ ಅತ್ಯಂತ ಯಶಸ್ವಿಯಾಗಿ ನಡೆಯಿತು.  

ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಿಂದ ಆರಂಭವಾದ ಜನಜಾಗೃತಿ ಜಾಥಾವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಧರ್ಮಸ್ಥಳ ಯೋಜನೆಯ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಕೈಯಲ್ಲಿ ಘೋಷಣಾ ಫಲಕಗಳನ್ನು ಹಿಡಿದು, ಮದ್ಯಪಾನ ಹಾಗೂ ಇತರ ದುಶ್ಚಟಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಾಥಾದಲ್ಲಿ ಭಾಗವಹಿಸಿದರು. ಯುವಜನರು ಹಾಗೂ ಸಾರ್ವಜನಿಕರಲ್ಲಿ ದುಶ್ಚಟಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಜಾಥಾವು ಸಾರ್ವಜನಿಕರ ಗಮನ ಸೆಳೆಯಿತು. 


ಸುದ್ದಿ ಓದಿ